
ಮಂಡ್ಯ: ಕೆರೆಯಲ್ಲಿ ಈಜಲು ಹೋದ ಇಬ್ಬರು ಯುವಕರು ಮುಳುಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಯರಗನಹಳ್ಳಿ ಬಳಿ ಸೋಮವಾರ ನಡೆದಿದೆ. ಮೃತರನ್ನು ಪ್ರಕಾಶ್ ಗೌಡ (24) ಮತ್ತು ಯಶಸ್ (23) ಎಂದು ಗುರುತಿಸಲಾಗಿದೆ.
ಇವರಿಬ್ಬರೂ ತಮ್ಮ ಸ್ನೇಹಿತರೊಂದಿಗೆ ಯರಗನಹಳ್ಳಿ ಕೆರೆಯಲ್ಲಿ ಈಜಲು ಹೋದಾಗ ಈ ದುರ್ಘಟನೆ ನಡೆದಿದೆ. ಇಬ್ಬರೂ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಅವರ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಯ ನಂತರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ. ನೀರಿನಲ್ಲಿ ಮುಳುಗಲು ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಯುವಕರು ಆಳ ನೀರಿಗೆ ಇಳಿದಿರಬಹುದು ಎಂದು ತಿಳಿದುಬಂದಿದೆ. ಮುಂದೆ ಇಂತಹ ಘಟನೆಗಳು ಸಂಭವಿಸದAತೆ ಕೆರೆಯ ಸುತ್ತಲೂ ಎಚ್ಚರಿಕೆ ಫಲಕಗಳು ಮತ್ತು ಸುರಕ್ಷತಾ ಕ್ರಮಗಳನ್ನು ಅಳವಡಿಸಬೇಕೆಂದು ಸ್ಥಳೀಯರು ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಈ ಸಂಬAಧ ಬಿಂಡಿಗನವಿಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕೆರೆಯಲ್ಲಿ ಈಜಲು ಹೋದ ಇಬ್ಬರು ಯುವಕರು ಸಾವು









