ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಮಾರ್ಚ್ ತಿಂಗಳ ಕಂತಿನ ಹಣ ನಾಲ್ಕೈದು ದಿನಗಳಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆಯಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ತಾಲ್ಲೂಕಿನ ಬಾಕನೂರಿನಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯೋಜನೆಯ ಏಪ್ರಿಲ್ ಕಂತಿನ ಹಣವೂ 8ರಿಂದ 10 ದಿನಗಳಲ್ಲಿ ಫಲಾನುಭವಿಗಳ ಕೈಸೇರಲಿದೆ ಎಂದು ಹೇಳಿದರು.
ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ: ಹೆಬ್ಬಾಳ್ಕರ್













