
ತಿರುವನಂತಪುರಂ: ಕೇರಳ ರಾಜ್ಯದ ನೂತನ ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಕಳೆದೊಂದು ವಾರದಿಂದ ನಡೆದಿದ್ದ ರಾಜಕೀಯ ಪ್ರಹಸನಕ್ಕೆ ಕೊನೆಗೂ ತೆರೆ ಬಿದ್ದಿದ್ದು ಯುಡಿಎಫ್ ಮತ್ತು ಕಾಂಗ್ರೆಸ್ ಮೈತ್ರಿಕೂಟ ವಿ.ಡಿ. ಸತೀಶನ್ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದೆ.
ಕೇರಳ ಮುಖ್ಯಮಂತ್ರಿ ಆಯ್ಕೆ ಕುರಿತ ಕಾಂಗ್ರೆಸ್ನ ಸಸ್ಪೆನ್ಸ್ಗೆ ಅಂತ್ಯವಾಗಿದ್ದು, ವಿ.ಡಿ.ಸತೀಶನ್ ಅವರೇ ನೂತನ ಮುಖ್ಯಮಂತ್ರಿ ಎಂದು ಘೋಷಣೆ ಮಾಡಲಾಗಿದೆ.
61 ವರ್ಷದ ಮಾಜಿ ವಿರೋಧ ಪಕ್ಷದ ನಾಯಕನಾಗಿದ್ದ ಅವರನ್ನು ಕಾಂಗ್ರೆಸ್ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ. ಈ ಮುಖ್ಯಮಂತ್ರಿ ಪದವಿ ರೇಸ್ ನಲ್ಲಿ ವೇಣುಗೋಪಾಲ್ ಹೆಸರು ಬಲವಾಗಿ ಕೇಳಿಬಂದಿತ್ತಾದರೂ ವಿ.ಡಿ ಸತೀಶನ್ ಮುನ್ನಡೆ ಸಾಧಿಸಿ ಈ ಸ್ಥಾನವನ್ನು ಪಡೆದಿದ್ದಾರೆ.
2026ರ ವಿಧಾನಸಭಾ ಚುನಾವಣೆಯಲ್ಲಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಭರ್ಜರಿ ಜಯ ಸಾಧಿಸಿದ ಬಳಿಕ ಮುಖ್ಯಮಂತ್ರಿ ಆಯ್ಕೆ ಕುರಿತು ನಡೆಯುತ್ತಿದ್ದ ಚರ್ಚೆಗೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ತೀರ್ಮಾನಕ್ಕೆ ಬಂದಿದೆ.
ಸತೀಶನ್ ಕೇರಳ ಸಿಎಂ












