--ಇಲ್ಲಿ ಜಾಹೀರಾತು--

ಕಂಪ್ಯೂಟರ್ ಆಧಾರಿತ ನೀಟ್ ಮುಂದಿನ ವರ್ಷದಿಂದ ಜಾರಿ: ಕೇಂದ್ರ ಶಿಕ್ಷಣ ಸಚಿವ ಪ್ರಧಾನ್

On: May 15, 2026 2:16 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ನವದೆಹಲಿ: ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ ನೀಟ್ ಪರೀಕ್ಷೆ ನಡೆಸಲಾಗುವುದು. ಪ್ರಶ್ನೆ ಪರೀಕ್ಷೆಯ ಸೋರಿಕೆಯ ಜವಾಬ್ದಾರಿಯನ್ನು ತೆಗೆದುಕೊಂಡು ಪರೀಕ್ಷಾ ಮಾಫಿಯಾ ವಿರುದ್ಧ ಹೋರಾಡುತ್ತೇವೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದರು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಇದರ ಜವಾಬ್ದಾರಿ ನಾವು ತೆಗೆದುಕೊಳ್ಳುತ್ತೇವೆ. ಸಚಿವಾಲಯ ಇದನ್ನು ಸರಿಪಡಿಸಲಿದೆ. ಮೇ 3ರಂದು ನಡೆಸಲಾಗಿದ್ದ ನೀಟ್ ಪರೀಕ್ಷೆಯನ್ನು ಈಗಾಗಲೇ ರದ್ದುಗೊಳಿಸಲಾಗಿದೆ. ಜೂನ್ 21ಕ್ಕೆ ಮರುಪರೀಕ್ಷೆ ದಿನಾಂಕ ನಿಗದಿಪಡಿಸಲಾಗಿದೆ. ಮುಂದಿನ ವರ್ಷದಿಂದ ನೀಟ್ ಪರೀಕ್ಷೆಯನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ವಿಧಾನದಲ್ಲಿ ನಡೆಸಲಾಗುವುದು ಎಂದು ತಿಳಿಸಿದರು.
ಮೇ 3ರಂದು ಪರೀಕ್ಷೆ ನಡೆದ ಬಳಿಕ ಮೇ 7ರಂದು ರಾಷ್ಟ್ರೀಯ ಪರೀಕ್ಷಾ ಮಂಡಳಿಗೆ ದೂರು ಬಂದಿತ್ತು. ಪರೀಕ್ಷೆಗೂ ಮುನ್ನ ಕೆಲವೆಡೆ ನೀಡಲಾಗಿದ್ದ ಗೆಸ್ ಪೇಪರ್‌ನಲ್ಲಿ ಪರೀಕ್ಷೆಯಲ್ಲಿ ನೀಡಲಾಗಿದ್ದ ಹೆಚ್ಚಿನ ಪ್ರಶ್ನೆಗಳು ಬಂದಿದ್ದವು ಎಂದು ಆರೋಪಿಸಲಾಗಿತ್ತು. ಕೂಡಲೇ ಉನ್ನತ ಶಿಕ್ಷಣ ಸಚಿವಾಲಯ ಈ ಸಂಬಂಧ ವಿಚಾರಣೆ ಆರಂಭಿಸಿ, ತನಿಖೆ ಹಸ್ತಾಂತರಿಸಿ ಬೇರೆ ರಾಜ್ಯಗಳನ್ನು ಸಂಪರ್ಕಿಸಿತ್ತು. ಮೇ 12ರಂದು ಗೆಸ್ ಪೇಪರ್ ಹೆಸರಲ್ಲಿ ಮೂಲ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ಖಚಿತವಾಗಿದೆ. ಬಳಿಕ ಮೇ 13ರಂದು ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿದೆವು ಎಂದು ಹೇಳಿದರು.
ಅಕ್ರಮಗಳ ವಿಷಯದಲ್ಲಿ ನಾವು ಯಾವುದೇ ಕಾರಣಕ್ಕೂ ರಾಜಿಯಾಗುವುದಿಲ್ಲ. ಇದರಿಂದ ಮಕ್ಕಳು ತಮ್ಮ ಹಕ್ಕುಗಳಿಂದ ವಂಚಿರಾಗಲು ಬಿಡುವುದಿಲ್ಲ. ಈ ಪರೀಕ್ಷಾ ಮಾಫಿಯಾ ಬಹುದಿನಗಳಿಂದ ನಡೆಯುತ್ತಿದೆ. ಇದರ ವಿರುದ್ಧ ಹೋರಾಟ ನಡೆಸುತ್ತೇವೆ. ಇದರ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿಯೂ ತಪ್ಪು ಮಾಹಿತಿ ಹರಡುತ್ತಿವೆ. ಈ  ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಶಿಕ್ಷೆ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now