
ಬೆಳಗಾವಿ: ರಿಕ್ಷಾ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ರಾಯಬಾಗ ರೈಲು ನಿಲ್ದಾಣದ ಬಳಿ ನಡೆದಿದೆ.
ಮೃತರನ್ನು ರಾಯಬಾಗ ತಾಲೂಕಿನ ಬೊಮ್ಮನಾಳ ನಿವಾಸಿಗಳಾದ ಮಹಾಂತೇಶ್ ಮಾನೆ ಮತ್ತು ಅವರ ಪತ್ನಿ ಸಾಕ್ಷಿ ಮಾನೆ ಹಾಗೂ 6 ತಿಂಗಳ ಮಗು ಎಂದು ಗುರುತಿಸಲಾಗಿದೆ. ಪತಿ, ಪತ್ನಿ ಹಾಗೂ ಮಗು ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ ರಿಕ್ಷಾ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ.
ಅಪಘಾತ: ಮಗು ಸೇರಿ ಮೂವರು ಸಾವು







