
ತುಮಕೂರು: ವಿದ್ಯಾವಾಹಿನಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಎ. ದಾನಿಯ ಜೆಮ್ಸಿ ಅವರು ಕೆ-ಸಿಇಟಿ 2026 ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ ರಾಜ್ಯಮಟ್ಟದಲ್ಲಿ 708ನೇ ಇಂಜಿನಿಯರಿAಗ್ ರ್ಯಾಂಕ್ ಗಳಿಸಿದ್ದಾರೆ.
ಶೈಕ್ಷಣಿಕ ಸಾಧನೆಯೊಂದಿಗೆ ಶಿಸ್ತು, ನಿರಂತರ ಪರಿಶ್ರಮ ಮತ್ತು ಆತ್ಮವಿಶ್ವಾಸದ ಪ್ರತೀಕವಾಗಿರುವ ದಾನಿಯ ಜೆಮ್ಸಿಯ ಈ ಸಾಧನೆ ವಿದ್ಯಾವಾಹಿನಿ ಶಿಕ್ಷಣ ಸಂಸ್ಥೆಯ ಗುಣಮಟ್ಟದ ಶಿಕ್ಷಣ, ವಿದ್ಯಾರ್ಥಿ-ಕೇಂದ್ರಿತ ಬೋಧನೆ ಹಾಗೂ ನಿರಂತರ ಮೌಲ್ಯಮಾಪನದ ಫಲವಾಗಿದೆ. ವಿದ್ಯಾವಾಹಿನಿ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ಎನ್.ಬಿ. ಪ್ರದೀಪ್ ಕುಮಾರ್ ಅವರು ಸನ್ಮಾನಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಯಶಸ್ಸೇ ನಮ್ಮ ಸಂಸ್ಥೆಯ ನಿಜವಾದ ಸಂಪತ್ತು. ಎ.ದಾನಿಯ ಜೆಮ್ಸಿಯ ಈ ಅದ್ಭುತ ಸಾಧನೆ ಇತರ ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕವಾಗಿದೆ. ಪರಿಶ್ರಮ, ಶಿಸ್ತು ಮತ್ತು ಸರಿಯಾದ ಮಾರ್ಗದರ್ಶನ ಇದ್ದರೆ ಯಾವುದೇ ಗುರಿಯನ್ನೂ ಸಾಧಿಸಬಹುದು. ದಾನಿಯ ಅವರ ಭವಿಷ್ಯ ಇನ್ನಷ್ಟು ಉಜ್ವಲವಾಗಿರಲಿ ಎಂದು ಹಾರೈಸುತ್ತೇನೆ ಎಂದು ಹೇಳಿದರು.
ಸಿಇಟಿಯಲ್ಲಿ ಜೆಮ್ಸಿಗೆ 708ನೇ ರ್ಯಾಂಕ್







