
ಬೆಂಗಳೂರು: ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ಗೆ (ಪಿಎಸ್‌ಐ) ತಮ್ಮ ಪುತ್ರಿ ಐಶ್ವರ್ಯಾ ಕಪಾಳಮೋಕ್ಷ ಮಾಡಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಬಿಜೆಪಿ ಶಾಸಕ ಬಿ.ಸುರೇಶ್ ಗೌಡ ಕ್ಷಮೆ ಯಾಚಿಸಿದ್ದಾರೆ.
ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸುರೇಶ್ ಗೌಡ ಅವರು, ಮಗಳು ಆ ಕ್ಷಣದಲ್ಲಿ ತಾಳ್ಮೆ ಕಳೆದುಕೊಂಡಿದ್ದಾಳೆ. ಸಾರ್ವಜನಿಕ ಜೀವನದಲ್ಲಿರುವವರು ಇಂತಹ ವರ್ತನೆ ತೋರಬಾರದು ಎಂದರು.
ನನ್ನ ಮಗಳದ್ದು ತಪ್ಪಿದ್ದರೆ, ನಾನು ಸಾರ್ವಜನಿಕವಾಗಿ ಕ್ಷಮೆ ಕೇಳಲು ಸಿದ್ಧನಿದ್ದೇನೆ. ಈ ರೀತಿಯ ವರ್ತನೆ ಯಾವುದೇ ಕಾರಣಕ್ಕೂ ಸರಿಯಲ್ಲ. ನನ್ನ ಮಗಳ ವರ್ತನೆಗಾಗಿ ನಾನೇ ಸಾರ್ವಜನಿಕವಾಗಿ ಕ್ಷಮೆಯಾಚಿಸುತ್ತೇನೆಂದು ಹೇಳಿದರು.
ಭೀಮನ ಅಮಾವಾಸ್ಯೆ ದಿನ ತಮ್ಮ ಮಗಳು ಇಬ್ಬರು ಚಿಕ್ಕ ಮಕ್ಕಳೊಂದಿಗೆ ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡ ದೇವಸ್ಥಾನಕ್ಕೆ ತೆರಳಿದ್ದರು. ದೇವಸ್ಥಾನದಲ್ಲಿ ಭಾರಿ ಸಂಖ್ಯೆಯಲ್ಲಿ ಭಕ್ತರು ಸೇರಿದ್ದ ಸಂದರ್ಭದಲ್ಲಿ ಪಿಎಸ್‌ಐ ಅವರನ್ನು ಒಳಗೆ ಬಿಡಲಿಲ್ಲ. ಆದರೆ, ವಿಐಪಿ ಸಾಲಿನಲ್ಲಿ ನಿಂತಿದ್ದ ಕೆಲವರನ್ನು ಒಳಗೆ ಕಳುಹಿಸಲಾಗುತ್ತಿತ್ತು ಎಂಬ ಕಾರಣಕ್ಕೆ ಮಾತಿನ ಚಕಮಕಿ ನಡೆದಿರಬಹುದು. ಈ ಸಂಬAಧ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಈಗಾಗಲೇ ಮಾತನಾಡಿರುವುದಾಗಿ ತಿಳಿಸಿದ್ದಾರೆ.
ಎಸ್‌ಐಗೆ ಕಪಾಳಮೋಕ್ಷ: ಪುತ್ರಿ ಪರ ಕ್ಷಮೆ ಕೇಳಿದ ಶಾಸಕ ಸುರೇಶ್ ಗೌಡ







