ತುರುವೇಕೆರೆ: ದ್ವಿ ಚಕ್ರ ವಾಹನ ಮತ್ತು ಕಾರಿನ ಮಧ್ಯೆ ನಡೆದ ಡಿಕ್ಕಿಯಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಡೊಂಕಿಹಳ್ಳಿಯಲ್ಲಿ ನಡೆದಿದೆ.
ತಾಲೂಕಿನ ದಂಡಿನಶಿವರ
ಹೋಬಳಿ ಡೊಂಕಿಹಳ್ಳಿಯ ನಿವಾಸಿ ಬಿಜೆಪಿ ಮುಖಂಡರಾದ ಡಿ.ಕೆ.ರಂಗೇಗೌಡ (65) ತೋಟಕ್ಕೆ ತಮ್ಮ ಪತ್ನಿಯೊಂದಿಗೆ ಬೆಳಗ್ಗೆ ತೆರಳಿದ್ದರು. ಮಧ್ಯಾಹ್ನ ಮನೆ ಕಡೆ ಹಿಂತಿರುಗುತ್ತಿದ್ದ ವೇಳೆ ತುರುವೇಕೆರೆ ಕಡೆಯಿಂದ ಬಂದ ಕಾರೊಂದು ಹಿಂಬದಿಯಿಂದ ದ್ವಿ ಚಕ್ರವಾಹನಕ್ಕೆ ಡಿಕ್ಕಿ ಹೊಡೆದಿದೆ. ಕೆಳಕ್ಕೆ ಬಿದ್ದ ಪರಿಣಾಮ ರಂಗೇಗೌಡರ ತಲೆಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದುಬಂದಿದೆ.ಬೈಕ್ ಹಿಂಬದಿಯಲ್ಲಿ ಕುಳಿತಿದ್ದ ಪತ್ನಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತರು ಕಲ್ಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ತಾಲೂಕು ಎಪಿಎಂಸಿ ಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ಇಬ್ಬರು ಮಕ್ಕಳು ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಈ ಸಂಬಂಧ ದಂಡಿನಶಿವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದರು.








