--ಇಲ್ಲಿ ಜಾಹೀರಾತು--

ಎಲ್ಲಾ ಕ್ಷೇತ್ರಗಳಲ್ಲೂ ಬರದ ಛಾಯೆ! ಶಾಸಕರು ಆತಂಕ ಪಡುವ ಅಗತ್ಯವಿಲ್ಲ: ಡಿಕೆಶಿ ಭರವಸೆ

On: September 7, 2026 2:38 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now

ಬೆಂಗಳೂರು:

ಬರ ತೀವ್ರವಾಗಿರುವ ಎಲ್ಲ ಕ್ಷೇತ್ರಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲು ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಭರವಸೆ ನೀಡಿದರು.
ಸೋಮವಾರ

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಭೀಕರ ಬರದ ಪರಿಸ್ಥಿತಿ ನಿರ್ಮಾಣವಾಗಿದ್ದು, ವೈಜ್ಞಾನಿಕ ಹಾಗೂ ತಾಂತ್ರಿಕ ವರದಿಗಳ ಆಧಾರದಲ್ಲಿ ಹಂತ ಹಂತವಾಗಿ ಇನ್ನಷ್ಟು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗುವುದು ಎಂದರು

.
21 ದಿನ ಮಳೆಯಾಗದ ಪ್ರದೇಶಗಳನ್ನು ಗುರುತಿಸಿ ತಾಂತ್ರಿಕ ವರದಿ ಆಧರಿಸಿ ತೀರ್ಮಾನ ಕೈಗೊಳ್ಳಲಾಗುವುದು. ಬರ ಘೋಷಣೆ ಕುರಿತು ಶಾಸಕರು ಆತಂಕ ಪಡುವ ಅಗತ್ಯವಿಲ್ಲ. ಉಪಮುಖ್ಯಮಂತ್ರಿ ವರದಿ ಪಡೆದು ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಬರ ಚರ್ಚೆಗೆ ಅಧಿವೇಶನ

ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿರುವ ಹಿನ್ನೆಲೆಯಲ್ಲಿ ರೈತರ ಸಮಸ್ಯೆಗಳ ಕುರಿತು ಚರ್ಚಿಸಲು ವಿಶೇಷ ವಿಧಾನಸಭೆ ಅಧಿವೇಶನ ಕರೆಯಲಾಗಿದೆ. ಬರಪೀಡಿತ ಪ್ರದೇಶಗಳ ವಾಸ್ತವ ಸ್ಥಿತಿಯನ್ನು ವೈಜ್ಞಾನಿಕವಾಗಿ ಪರಿಶೀಲಿಸಿ, ರೈತರಿಗೆ ಅಗತ್ಯ ನೆರವು ಒದಗಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಡಿ.ಕೆ.ಶಿವಕುಮಾರ್‌ ತಿಳಿಸಿದರು.
ರೈತರು ಆಸ್ತಿ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಅವರನ್ನು ರಕ್ಷಿಸುವುದು ಸರ್ಕಾರದ ಜವಾಬ್ದಾರಿ. ಹಿಂದಿನ ಸರ್ಕಾರಗಳು ಒಪ್ಪಂದಗಳಿಗೆ ಸಹಿ ಮಾಡಿ ಕೊಟ್ಟಿವೆ. ರೈತರು ಆಸ್ತಿ ಕಳೆದುಕೊಂಡಿದ್ದಾರೆ. ನನಗೂ ಪ್ರಜ್ಞೆ ಇದೆ ಎಂದು ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದರು.

 

 

ನೈಸ್‌‍ ಯೋಜನೆ ವಿಚಾರವಾಗಿ ರಾಜ್ಯ ಸರ್ಕಾರ ಕಾನೂನು ಉಲ್ಲಂಘಿಸಿ ಸಂಪುಟ ತೀರ್ಮಾನ ಕೈಗೊಂಡಿದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಬಹಿರಂಗ ಪತ್ರ ಬರೆದಿರುವ ಬಗ್ಗೆ ಗಮನ ಸೆಳೆದಾಗ, ನಾವು ಏನು ಮಾಡಿದರೂ ಕಾನೂನು ಚೌಕಟ್ಟಿನಲ್ಲೇ ಮಾಡುತ್ತೇವೆ. ಕಾನೂನು ಅಭಿಪ್ರಾಯ ಪಡೆದುಕೊಳ್ಳುತ್ತೇವೆ. ಎಲ್ಲವನ್ನೂ ಮರುಪರಿಶೀಲನೆ ಮಾಡುತ್ತಿದ್ದೇವೆ. ಕಾನೂನು ಉಲ್ಲಂಘನೆಯಾಗಿದ್ದರೆ ಕೋರ್ಟ್‌ ಇದೆ. ಹೋರಾಟ ಮಾಡಲಿ ಎಂದು ತೀಕ್ಷ್ಣವಾಗಿ ತಿರುಗೇಟು ನೀಡಿದರು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now