ಚಿಕ್ಕಬಳ್ಳಾಪುರ: ಓಮ್ನಿ ಕಾರು ಹಾಗೂ ಮಿನಿ ಗೂಡ್ಸ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಮೃತಪಟ್ಟ ಘಟನೆ ಶಿಡ್ಲಘಟ್ಟ ತಾಲೂಕಿನ ಕೊತ್ತನೂರು ಗೇಟ್ ಬಳಿ ನಡೆದಿದೆ.
ಮೃತರನ್ನು ಚಿಂತಾಮಣಿ ತಾಲೂಕಿನ ಮಲ್ಲಿಕಾರ್ಜುನಪುರ ಗ್ರಾಮದ ರೂಪಾ (30), ರತ್ನಮ (45) ಹಾಗೂ ಮುನಿಚೆನ್ನಮ (40) ಎಂದು ಗುರುತಿಸಲಾಗಿದೆ. ಇವರು ಮಲ್ಲಿಕಾರ್ಜುನಪುರದಿಂದ ಹುಜುಗೂರು ಗ್ರಾಮಕ್ಕೆ ಹೂ ಕಟಾವು ಕೆಲಸಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.
ಓಮ್ನಿ ಕಾರಿನಲ್ಲಿ ಸುಮಾರು 10 ಮಂದಿ ಕೂಲಿ ಕಾರ್ಮಿಕರಿದ್ದು, ಚಾಲಕ ಮನೋಜ್ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಶಿಡ್ಲಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭೀಕರ ಅಪಘಾತಕ್ಕೆ ಮೂವರು ಮಹಿಳೆಯರು ಬಲಿ ಶಿಡ್ಲಘಟ್ಟದ ಕೊತ್ತನೂರು ಗೇಟ್ ಬಳಿ ಘಟನೆ








