--ಇಲ್ಲಿ ಜಾಹೀರಾತು--

ಮೈಶುಗರ್ ಬಾಯ್ಲರ್‌ಗೆ ಬಿದ್ದು ಕಾರ್ಮಿಕ ಸಾವು

On: September 9, 2026 3:08 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now

ಮಂಡ್ಯ: ಮೈಶುಗರ್ ಕಾರ್ಖಾನೆ ಬಾಯ್ಲರ್‌ಗೆ ಬಿದ್ದು ಕಾರ್ಮಿಕನೊಬ್ಬ ದುರ್ಮರಣಕ್ಕೀಡಾದ ಘಟನೆ ನಡೆದಿದೆ. ಕೆ.ಶೆಟ್ಟಿಹಳ್ಳಿಯ ಚರಣ್ ಕುಮಾರ್ (33) ಮೃತ ಕಾರ್ಮಿಕ.
ಶ್ರೇಯ ಏಜೆನ್ಸಿಯಡಿ ಗುತ್ತಿಗೆ ಆಧಾರದಲ್ಲಿ ಚರಣ್ ಒಂದೂವರೆ ವರ್ಷದಿಂದ ಕೆಲಸ ಮಾಡುತ್ತಿದ್ದ. ಸೆಪ್ಟೆಂಬರ್ 3ರಂದು ಬಾಯ್ಲರ್‌ಗೆ ಬಿದ್ದಿದ್ದ. ಆತನನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಕಾರ್ಮಿಕ ಮೃತಪಟ್ಟಿದ್ದಾನೆ.
ಆಡಳಿತ ಮಂಡಳಿ ನಿರ್ಲಕ್ಷ್ಯಕ್ಕೆ ಕಾರ್ಮಿಕ ಸಾವನ್ನಪ್ಪಿದ್ದಾನೆಂದು ಆರೋಪಿಸಿ ಮೃತ ಕಾರ್ಮಿಕನ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಕಾರ್ಖಾನೆ ಎದುರು ಪ್ರತಿಭಟನೆ ನಡೆಸಿದರು. ಅಧಿಕಾರಿಗಳು ಹಾಗೂ ಮೈಶುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಪ್ರತಿಭಟನಾ ಸ್ಥಳಕ್ಕೆ ಬಂದಿಲ್ಲ ಎಂದು ಮೃತ ಕಾರ್ಮಿಕನ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ. ಕಾರ್ಖಾನೆ ಎದುರು ಬಿಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now