--ಇಲ್ಲಿ ಜಾಹೀರಾತು--

ಭೀಕರ ಅಪಘಾತ: ಬಸ್ ಚಾಲಕ ಸಾವು

On: September 9, 2026 3:16 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now

ಮಂಡ್ಯ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್‌ಆರ್‌ಟಿಸಿ ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಿರಹಳ್ಳಿ ಜಂಕ್ಷನ್ ಬಳಿ ನಡೆದಿದೆ.

ಕಬ್ಬಿಣದ ಸರಳು ತುಂಬಿಕೊAಡು ಸಾಗುತ್ತಿದ್ದ ಟ್ರ‍್ಯಾಕ್ಟರ್ ಅನ್ನು ಕೆಎಸ್‌ಆರ್‌ಟಿಸಿ ಬಸ್ ಓವರ್‌ಟೇಕ್ ಮಾಡಲು ಯತ್ನಿಸಿದಾಗ ಈ ದುರಂತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಟ್ರ‍್ಯಾಕ್ಟರ್‌ನಲ್ಲಿದ್ದ ಕಬ್ಬಿಣದ ಸರಳುಗಳು ಬಸ್ಸಿನ ಒಳಭಾಗಕ್ಕೆ ನುಗ್ಗಿದ ಪರಿಣಾಮ ಬಸ್ ಚಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.

ಅಪಘಾತದಲ್ಲಿ ಬಸ್‌ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಬೆಳ್ಳೂರಿನ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಳ್ಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now