--ಇಲ್ಲಿ ಜಾಹೀರಾತು--

ಎಟಿಎಂನಲ್ಲಿ ಹಣ ಕದಿಯುತ್ತಿದ್ದ ಕಳ್ಳ ಬಂಧನ

On: August 13, 2025 2:50 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬಳ್ಳಾರಿ: ಬಳ್ಳಾರಿಯಲ್ಲಿ ಎಟಿಎಂ ಕಿಯೋಸ್ಕ್ ಮುರಿದು ಹಣ ಕದಿಯುತ್ತಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.
ನಗರದ ಕಾಳಮ್ಮ ಸರ್ಕಲ್ ಬಳಿ ಇರುವ ಆಕ್ಸಿಸ್ ಬ್ಯಾಂಕ್ ಎಟಿಎಂಗೆ ನುಗ್ಗಿ ಕಳ್ಳತನ ಮಾಡಲು ಯತ್ನಿಸಿದ ಆರೋಪಿಯನ್ನು ರಾತ್ರಿ ಬೀಟ್ ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ಬ್ರೂಸ್ ಪೇಟೆ ಪೊಲೀಸ್ ಠಾಣೆಯ ಎಎಸ್ ಐ ಮಲ್ಲಿಕಾರ್ಜುನ್ ಅವರಿಗೆ ಎಟಿಎಂನಲ್ಲಿ ಕಳ್ಳನ ಇರುವಿಕೆಯ ಬಗ್ಗೆ ಸುಳಿವು ಸಿಕ್ಕಿದ್ದು, ಕೂಡಲೇ ಎಎಸ್ ಐ ಮತ್ತು ಇಬ್ಬರು ಕಾನ್ಸ್ ಟೆಬಲ್ ಗಳು ಎಟಿಎಂಗೆ ಧಾವಿಸಿ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಆಂಧ್ರ ಪ್ರದೇಶದ ಅನಂತಪುರದ ವೆಂಕಟೇಶ ಎಂದು ಗುರುತಿಸಲಾಗಿದೆ. ಪೊಲೀಸ್ ಕಾರ್ಯಾಚರಣೆಯ ರೋಚಕ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಆರೋಪಿ ವೆಂಕಟೇಶ ಎಟಿಎಂ ಕಿಯೋಸ್ಕ್ ಹೊತ್ತೊಯ್ಯಲು ಯತ್ನಿಸಿದ್ದಾನೆ. ಈ ಬಗ್ಗೆ ಖಚಿತ ಮಾಹಿತಿ ಪಡೆದು ಸ್ಥಳಕ್ಕೆ ಧಾವಿಸಿದ ಎಎಸ್ ಐ ಮಲ್ಲಿಕಾರ್ಜುನ ಖದೀಮನನ್ನು ಬಂಧಿಸಲು ಯತ್ನಿಸಿದ್ದಾರೆ. ಆತ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಇಬ್ಬರ ನಡುವೆ ತೀವ್ರ ಜಟಾಪಟಿಯಾಗಿದೆ. ಅಷ್ಟರಲ್ಲಿ ರಾತ್ರಿ ಬೀಟ್ ನ ಮತ್ತೊಬ್ಬ ಕಾನ್ಸ್ ಟೇಬಲ್ ನಿಂಗಪ್ಪ ಎಎಸ್ ಐ ಸಹಾಯಕ್ಕೆ ಧಾವಿಸಿದ್ದಾರೆ. ನಂತರ ಆರೋಪಿಯನ್ನು ಥಳಿಸಿದ ಪೊಲೀಸರು ಆತನನ್ನು ಬಂಧಿಸಿದ್ದಾರೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now