--ಇಲ್ಲಿ ಜಾಹೀರಾತು--

ಮಾದಕ ಪದಾರ್ಥ ಮಾರಾಟ- ಇಬ್ಬರ ಬಂಧನ

On: August 19, 2025 2:44 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ವಿದ್ಯಾರ್ಥಿ ವೀಸಾದಡಿ ಬಂದು ಮಾದಕ ಪದಾರ್ಥ ಮಾರಾಟ ದಂಧೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಬಂಧಿಸಿದ್ದಾರೆ.
ಆಫ್ರಿಕಾ ಮೂಲದ ಜೋಯಲ್ ಕಾಬೊಂಗ್ ಹಾಗೂ ಆತನ ಸ್ನೇಹಿತೆ ಜೋಯ್ ಸಂಡೆ ಎಂಬಾಕೆಯನ್ನ ಬಂಧಿಸಲಾಗಿದ್ದು, ಬರೋಬ್ಬರಿ 5 ಕೋಟಿ ರೂ ಮೌಲ್ಯದ 2 ಕೆಜಿ 150 ಗ್ರಾಂ ತೂಕದ ಎಂಡಿಎಂಎ ಕ್ರಿಸ್ಟಲ್ಸ್ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಜೋಯಲ್ ಕಾಬೊಂಗ್ 12 ವರ್ಷಗಳ ಹಿಂದೆ ಸ್ಟೂಡೆಂಟ್ ವೀಸಾದಡಿ ಭಾರತಕ್ಕೆ ಬಂದಿದ್ದ. ಜೋಯ್ ಸಂಡೆ ಸಹ ಸ್ಟೂಡೆಂಟ್ ವೀಸಾ ಪಡೆದು 3 ವರ್ಷಗಳ ಹಿಂದೆ ಭಾರತಕ್ಕೆ ಬಂದಿದ್ದಳು. ಇಬ್ಬರ ವೀಸಾ ಅವಧಿ ಅಂತ್ಯವಾದ ಬಳಿಕವೂ ಭಾರತದಲ್ಲಿ ಉಳಿದುಕೊಂಡು ಮಾದಕ ಪದಾರ್ಥಗಳ ಮಾರಾಟ ದಂಧೆಯಲ್ಲಿ ತೊಡಗಿದ್ದರು. ಆ.15ರಂದು ಬೆಟ್ಟದಾಸನಪುರ ಬಳಿ ಗಿರಾಕಿಗಳಿಗೆ ಎಂಡಿಎಂಎ ಮಾರಾಟ ಮಾಡಲು ನಿಂತಿದ್ದ ಜೋಯಲ್ ಕಾಬೊಂಗ್ನನ್ನ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಬಂಧಿಸಿದ್ದರು. ಬಳಿಕ ಆತ ನೀಡಿದ ಮಾಹಿತಿ ಆಧರಿಸಿ ಅದೇ ದಿನ ಆತನ ಸ್ನೇಹಿತೆ ಜೋಯ್ ಸಂಡೆಯನ್ನ ಬಂಧಿಸಿದ್ದರು. ಆರೋಪಿಗಳಿಗೆ ಕಡಿಮೆ ಬೆಲೆಗೆ ಎಂಡಿಎಂಎ ಸರಬರಾಜು ಮಾಡುತ್ತಿದ್ದ ಮತ್ತೋರ್ವ ಆರೋಪಿ ದೆಹಲಿಗೆ ಎಸ್ಕೇಪ್ ಆಗಿದ್ದು, ಆತನ ಪತ್ತೆಗಾಗಿ ಹುಡುಕಾಟ ಮುಂದುವರೆಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now