--ಇಲ್ಲಿ ಜಾಹೀರಾತು--

ಸಿಎಂ ನಿವಾಸದ ಬಳಿ ಕಾರಿಗೆ ಬೆಂಕಿ

On: September 12, 2025 3:04 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿ ಬಳಿ ಇದ್ದಕ್ಕಿದ್ದಂತೆ ಕಾರಿಗೆ ಬೆಂಕಿ ತಗುಲಿ ಧಗಧಗನೆ ಹೊತ್ತಿ ಉರಿದ ಘಟನೆ ಶುಕ್ರವಾರ ನಡೆದಿದೆ.
ಬೆಳಗ್ಗೆ ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಸಾಫ್ಟ್ ವೇರ್ ಎಂಜಿನಿಯರ್ ಹಾಗೂ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸಾಫ್ಟ್ ವೇರ್ ಇಂಜಿನಿಯರ್ ಸಚಿನ್ ಎಂಬುವವರು ಕಾರಿನಲ್ಲಿ ಕೋರಮಂಗಲದಿಂದ ಗಂಗಾನಗರದಲ್ಲಿರುವ ಸಬ್ ರಿಜಿಸ್ಟ್ರರ್ ಕಚೇರಿಗೆ ಆಸ್ತಿ ನೋಂದಣಿಗಾಗಿ ತೆರಳುತ್ತಿದ್ದರು. ಸಿಎಂ ಮನೆ ಸಮೀಪದ ಅರಮನೆ ರಸ್ತೆಯ ವಿಲ್ಸನ್ ಮ್ಯಾನರ್ ಸೇತುವೆಯ ಸರ್ವಿಸ್
ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಘಟನೆಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ, ಸಿಎಂ ನಿವಾಸದ ಸಮೀಪ ನಡೆದ ಈ ಘಟನೆ ತೀವ್ರ ಆತಂಕಕ್ಕೆ ಕಾರಣವಾತು.
ಹೈಗ್ರೌಂಡ್ಸ್ ಠಾಣೆ ಪೊಲೀಸರು ಸುಟ್ಟು ಹೋದ ಕಾರನ್ನು ಅಲ್ಲಿಂದ ತೆರವುಗೊಳಿಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now