--ಇಲ್ಲಿ ಜಾಹೀರಾತು--

ಲಂಚಕ್ಕೆ ಬೇಡಿಕೆ- ಇಬ್ಬರು ಇನ್ಸ್ ಪೆಕ್ಟರ್ ಅಮಾನತು

On: September 23, 2025 3:10 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ಲಂಚಕ್ಕೆ ಬೇಡಿಕೆ ಹಾಗೂ ಕರ್ತವ್ಯ ಲೋಪದ ಆರೋಪದಡಿ ಇಬ್ಬರು ಪೊಲೀಸ್ ಇನ್ಸ್ಪೆಕ್ಟರ್ ಗಳ ಸಹಿತ ಐವರು ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಆದೇಶಿಸಿದ್ದಾರೆ.
ಪ್ರತ್ಯೇಕ ಪ್ರಕರಣಗಳಲ್ಲಿ ಕೋರಮಂಗಲ ಠಾಣೆಯ ಇನ್ಸ್ ಪೆಕ್ಟರ್ ಲೂಯಿರಾಮ ರೆಡ್ಡಿ ಹಾಗೂ ಹಲಸೂರು ಗೇಟ್ ಠಾಣೆಯ ಇನ್ಸ್ ಪೆಕ್ಟರ್ ಹನುಮಂತ ಭಜಂತ್ರಿ ಸೇರಿದಂತೆ ಐವರು ಸಿಬ್ಬಂದಿ ಅಮಾನತುಗೊಳಿಸಲಾಗಿದೆ.
ಚಿನ್ನದ ಉದ್ಯಮಿಯೊಬ್ಬರಿಂದ 10 ಲಕ್ಷ ರೂಪಾಯಿ ವಸೂಲಿಗೆ ಯತ್ನಿಸಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಹಲಸೂರು ಗೇಟ್ ಠಾಣೆಯ ಇನ್ಸ್ ಪೆಕ್ಟರ್ ಹನುಮಂತ ಭಜಂತ್ರಿ, ಓರ್ವ ಎಎಸ್ ಐ ಸೇರಿದಂತೆ ಮೂವರು ಸಿಬ್ಬಂದಿ ಅಮಾನತುಗೊಳಿಸಲಾಗಿದೆ. ಇನ್ನೊಂದು ಪ್ರಕರಣದಲ್ಲಿ ಅವಧಿಗೂ ಮೀರಿ ಪಬ್, ಬಾರ್, ರೆಸ್ಟೋರೆಂಟ್ ಗಳು ಗ್ರಾಹಕರಿಗೆ ಸೇವೆ ನೀಡಲು ಅವಕಾಶ ನೀಡಿದ ಆರೋಪದಡಿ ಕೋರಮಂಗಲ ಠಾಣೆಯ ಇನ್ಸ್ ಪೆಕ್ಟರ್ ಲೂಯಿರಾಮ ರೆಡ್ಡಿ ಅವರನ್ನು ಅಮಾನತುಗೊಳಿಸಲಾಗಿದೆ. ಇತ್ತೀಚೆಗೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ನೇತೃತ್ವದಲ್ಲಿ ರಾತ್ರಿ ಗಸ್ತು ಕಾರ್ಯಾಚರಣೆ ಕೈಗೊಂಡಾಗ ಅವಧಿ ಅಂತ್ಯವಾದ ನಂತರವೂ ಪಬ್, ಬಾರ್, ರೆಸ್ಟೋರೆಂಟ್ ಗಳು ಗ್ರಾಹಕರಿಗೆ ಸೇವೆ ನೀಡುತ್ತಿರುವುದು ಕಂಡು ಬಂದಿತ್ತು.ಆಗ್ನೇಯ ವಿಭಾಗ ಹಾಗೂ ಕೇಂದ್ರ ವಿಭಾಗದ ಡಿಸಿಪಿಯವರ ಪ್ರಾಥಮಿಕ ತನಿಖಾ ವರದಿ ಆಧರಿಸಿ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.
ಜೊತೆಗೆ ಇಲಾಖಾ ತನಿಖೆಗೆ ಆದೇಶಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now