ಮೈಸೂರು: ಶ್ರೀ ಶಿವರಾತ್ರೀಶ್ವರ ಧಾರ್ಮಿಕ ದತ್ತಿಯಿಂದ ನೀಡಲಾಗುವ ಶ್ರೀ ಶಿವರಾತ್ರೀಶ್ವರ ಪ್ರಶಸ್ತಿಗೆ ಕೃತಿಗಳನ್ನು ಆಹ್ವಾನಿಸಲಾಗಿದೆ. ವೀರಶೈವ ಲಿಂಗಾಯತ ಧರ್ಮ, ಸಾಹಿತ್ಯ, ಇತಿಹಾಸ, ಕಲೆ ಹಾಗೂ ಸಂಸ್ಕೃತಿಗೆ ಸಂಬಂಧಿಸಿದಂತೆ 2025ನೇ ಸಾಲಿನಲ್ಲಿ ಪ್ರಕಟವಾದ ಕೃತಿಗಳನ್ನು ಪರಿಗಣಿಸಲಾಗುವುದು. 1983ರಿಂದ ಪ್ರತಿ ವರ್ಷ ಒಂದು ಉತ್ತಮ ಕೃತಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿಯು ಫಲಕ ಹಾಗೂ 25 ಸಾವಿರ ನಗದು ಪುರಸ್ಕಾರವನ್ನು ಒಳಗೊಂಡಿದೆ. ಲೇಖಕರು ಹಾಗೂ ಪ್ರಕಾಶಕರು ಪ್ರಕಟಿತ ಕೃತಿಗಳನ್ನು ನಿರ್ದೇಶಕರು, ಪ್ರಕಟಣ ವಿಭಾಗ, ಜೆಎಸ್‌ಎಸ್ ಮಹಾವಿದ್ಯಾಪೀಠ, ಜಗದ್ಗುರು ಶಿವರಾತ್ರಿ ರಾಜೇಂದ್ರ ವೃತ್ತ, ಮೈಸೂರು 570004 ಈ ವಿಳಾಸಕ್ಕೆ ಮಾ.31ರ ಒಳಗೆ ಕಳುಹಿಸಲು ಪ್ರಕಟಣೆ ತಿಳಿಸಿದೆ.
ಶಿವರಾತ್ರೀಶ್ವರ ಪ್ರಶಸ್ತಿಗೆ ಕೃತಿಗಳ ಆಹ್ವಾನ










