--ಇಲ್ಲಿ ಜಾಹೀರಾತು--

ಅಕ್ರಮ ಮದ್ಯ ದಂಧೆ ತಡೆಗೆ ಹೊಸ ಕಾಯ್ದೆ ಜಾರಿ: ತಿಮ್ಮಾಪುರ

On: March 17, 2026 2:52 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು:
ರಾಜ್ಯದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಹಾಗೂ ಅಕ್ರಮವಾಗಿ ಮದ್ಯ ತಯಾರಿಕೆ ದಂಧೆ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಅಕ್ರಮ ಮಾರಾಟ ತಡೆಗಟ್ಟಲು ಕರ್ನಾಟಕ ಅಬಕಾರಿ ಕಾಯ್ದೆಯನ್ನು ಪರಿಷ್ಕರಿಸಿ ಹೊಸ ಕಾಯ್ದೆ ತರುವುದಕ್ಕೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಸಚಿವ ಆರ್.ಬಿ.ತಿಮ್ಮಾಪುರ ತಿಳಿಸಿದರು.
ಈ ಬಗ್ಗೆ ಚರ್ಚಿಸಿ ಕ್ರಮ ವಹಿಸಲಾಗುವುದು ಅಲ್ಲದೆ, ಅಕ್ರಮ ಮದ್ಯ ಮಾರಾಟವನ್ನು ಮಾದಕ ವಸ್ತು ನಿಯಂತ್ರಣ ಕಾಯ್ದೆಯಡಿ ಸೇರಿಸಲು ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂದು ಅವರು ಹೇಳಿದರು.
ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ಮಂಗಳವಾರ ಶಾಸಕ ಬಸನಗೌಡ ದದ್ದಲ್ ಅವರು ರಾಯಚೂರು ಜಿಲ್ಲೆಯಲ್ಲಿ ಸ್ವಲಾಭಕ್ಕಾಗಿ ಅನಧಿಕೃತ ಸ್ಥಳಗಳಲ್ಲಿ, ಕಿರಾಣಿ ಅಂಗಡಿಗಳಲ್ಲೂ ಸಹ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ. ಕರ್ನಾಟಕ ಅಬಕಾರಿ ಕಾಯ್ದೆಗಳ 1965ರ ಕಾಯ್ದೆಗಳ ರೀತ್ಯಾ ಯಾವುದೇ ಕ್ರಮ ಆಗುತ್ತಿಲ್ಲ ಏಕೆ ಎಂದು ಪ್ರಶ್ನಿಸಿದರು.
ಶಾಸಕರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಬಕಾರಿ ಅಕ್ರಮಗಳನ್ನು ನಿಯಂತ್ರಿಸಲು ಅಬಕಾರಿ ಇಲಾಖೆಯಿಂದ ವಲಯ ವ್ಯಾಪ್ತಿಯ ರೂಟ್ ಗಳಲ್ಲಿ ನಿರಂತರವಾಗಿ ಗಸ್ತು ನಡೆಸಲಾಗುತ್ತಿದೆ. ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ನಿಯಮಿತವಾಗಿ ರಸ್ತೆಕಾವಲು ನಡೆಸಿ ಸಂಶಯಾಸ್ಪದ ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸ್ಥಾಯಿ ಸಮಿತಿ ಸಭೆಯನ್ನು ಏರ್ಪಡಿಸಿ ಅಕ್ರಮ ಹತ್ತಿಕ್ಕಲು ಕ್ರಮವಹಿಸಲಾಗುತ್ತಿದೆ. ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 50ರಂತೆ ಕಾರ್ಯವ್ಯಾಪ್ತಿಯಲ್ಲಿ ನಡೆಯುವ ಅಬಕಾರಿ ಅಕ್ರಮಗಳ ಕುರಿತು ನಿಯಮಗಳನುಸಾರ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದು ತಿಳಿಸಿದರು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now