--ಇಲ್ಲಿ ಜಾಹೀರಾತು--

ಡಿವೈಡರ್‌ಗೆ ಬಸ್ ಡಿಕ್ಕಿ: ನಾಲ್ವರು ಪ್ರಯಾಣಿಕರು ಸಾವು

On: March 23, 2026 2:24 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ರಾಮನಗರ:
ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಡಿವೈಡರ್‌ಗೆ ಖಾಸಗಿ ಬಸ್ ಡಿಕ್ಕಿಯಾಗಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಕೇರಳ ಮೂಲದ ಪಿ.ಕೆ ಟ್ರಾವೆಲ್ಸ್ ಕಂಪನಿಗೆ ಸೇರಿದ ಬಸ್ ಕೇರಳದಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗ್ರಾಮದ ಪುಟ್ಟಪ್ಪನದೊಡ್ಡಿ ಬಳಿ ಡಿವೈಡರ್‌ಗೆ ಬಸ್ ಡಿಕ್ಕಿಯಾಗಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಚಾಲಕ ನಿದ್ದೆ ಮಂಪರಿನಲ್ಲಿ ಇದ್ದಿದ್ದರಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಮೃತರ ಪೈಕಿ ಇಬ್ಬರು ಬೆಂಗಳೂರಿನವರು. ಮೃತರನ್ನು ಕೇರಳದ ಕಾಜಿಕೋಟೆಯ ಮೊಹಮ್ಮದ್ ಫರಾನ್ (22), ಸುಲ್ಫಿ (45), ಬೆಂಗಳೂರಿನ ಕಲಾಸಿಪಾಳ್ಯದ ನಿವಾಸಿ ರಶೀದ್ (45) ಹಾಗೂ ಆಡುಗೋಡಿಯ ಅಣ್ಣೆಪಾಳ್ಯ ನಿವಾಸಿ ಸಾಕೇರ್ ಎಂದು ಗುರುತಿಸಲಾಗಿದೆ. ಕೇರಳದ ಕಣ್ಣೂರಿನ ಅಬ್ದುಲ್, ಅಲೇನ್ ಎಂಬುವರಿಗೆ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now