--ಇಲ್ಲಿ ಜಾಹೀರಾತು--

ಸಮರ್ಥ್ ಗೆ ಸಿಎಂ, ಡಿಸಿಎಂ ಸಾಥ್

On: March 23, 2026 2:31 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ದಾವಣಗೆರೆ:
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಸೋಮವಾರ ನಾಮಪತ್ರ ಸಲ್ಲಿಸಿದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ತಂದೆ, ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ತಾಯಿ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಸಾಥ್ ನೀಡಿದರು. ದುರ್ಗಾಂಬಿಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಯಿತು. ಬಳಿಕ ದಾವಣಗೆರೆಗೆ ಒಂದೇ ಹೆಲಿಕಾಪ್ಟರ್‌ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಬಂದಿಳಿದರು. ಬಳಿಕ ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಕೆ ಮಾಡಲಾಯಿತು.
ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಎಲ್ಲರನ್ನೂ ಒಳಗೊಂಡಿರುವ ಪಕ್ಷ ಎಂದರೆ ಕಾಂಗ್ರೆಸ್. ನಾವು ಆ ಜಾತಿ ಈ ಜಾತಿ ಅಂತ ನೋಡಿಲ್ಲ. ನಾನು ಕುಟುಂಬ ರಾಜಕಾರಣವನ್ನು ಬೆಂಬಲಿಸೋದಿಲ್ಲ. ಯಾವ ಅಭ್ಯರ್ಥಿ ಗೆಲ್ಲುತ್ತಾರೋ ಅವರನ್ನು ನಿಲ್ಲಿಸುತ್ತೇವೆ. ಯಾರು ಶಾಸಕರು ಮೃತರಾಗುತ್ತಾರೋ ಅವರ ಕುಟುಂಬಕ್ಕೆ ಟಿಕೆಟ್ ನೀಡುವುದು ಕಾಂಗ್ರೆಸ್ ಪಕ್ಷದ ನೀತಿ. ಹೀಗಾಗಿ ಬಾಗಲಕೋಟೆಯಲ್ಲಿ ಮೇಟಿ ಅವರ ಕುಟುಂಬಕ್ಕೆ ನೀಡಲಾಗಿದೆ ಎಂದು ತಿಳಿಸಿದರು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now