--ಇಲ್ಲಿ ಜಾಹೀರಾತು--

ಇರಾನ್ ಸಂಘರ್ಷದಲ್ಲಿ ಪಾಕಿಸ್ತಾನ ಮಧ್ಯಸ್ಥಿಕೆ?

On: March 24, 2026 2:27 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ವಾಷಿಂಗ್ಟನ್:
ಇರಾನ್ ಮತ್ತು ಅಮೆರಿಕ ನಡುವೆ ನಡೆಯುತ್ತಿರುವ ಯುದ್ಧ ಕೊನೆಗೊಳಿಸಲು ಪಾಕಿಸ್ತಾನ ಮಧ್ಯಸ್ಥಿಕೆ ವಹಿಸುತ್ತಾ ಎಂಬ ಪ್ರಶ್ನೆ ಎದ್ದಿದೆ. ಪಾಕಿಸ್ತಾನದ ಮೂಲಕ ಇರಾನ್ ಜೊತೆ ಮಾತುಕತೆ ನಡೆಸಲು ಅಮೆರಿಕ ಮುಂದಾಗಿದೆ. ಈ ವಾರದಲ್ಲೇ ಅಮೆರಿಕ ಮತ್ತು ಇರಾನ್ ಹಿರಿಯ ಅಧಿಕಾರಿಗಳ ಮಧ್ಯೆ ಪಾಕಿಸ್ತಾನದಲ್ಲಿ ಮಾತುಕತೆ ನಡೆಯಲಿದೆ ಎಂದು ಇಸ್ರೇಲ್ ಮೂಲ ಉಲ್ಲೇಖಿಸಿ ಮಾಧ್ಯಮ ಸುದ್ದಿ ಪ್ರಕಟಿಸಿದೆ.
ಮಾತುಕತೆಗಳು ಕಾರ್ಯರೂಪಕ್ಕೆ ಬಂದರೆ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಅಮೆರಿಕದ ಪರವಾಗಿ ಹಾಜರಾಗುವ ಸಾಧ್ಯತೆಯಿದೆ. ಪಾಕಿಸ್ತಾನ, ಟರ್ಕಿ ಮತ್ತು ಈಜಿಪ್ಟ್ ಪಶ್ಚಿಮ ಏಷ್ಯಾ ಸಂಘರ್ಷವನ್ನು ಶಮನಗೊಳಿಸಲು ಎರಡೂ ಕಡೆಯವರನ್ನು ಮನವೊಲಿಸಿ ಮಾತುಕತೆ ನಡೆಸಲು ಸಕ್ರಿಯವಾಗಿ ಕೆಲಸ ಮಾಡುತ್ತಿವೆ. ಅಮೆರಿಕ ಮತ್ತು ಇರಾನ್ ನಡುವೆ ರಾಜತಾಂತ್ರಿಕ ಸಂಪರ್ಕ ಸಹ ನಡೆಯುತ್ತಿದೆ. ಅಮೆರಿಕದ ರಾಯಭಾರಿ ಸ್ಟೀವ್ ವಿಟ್ಕಾಫ್ ಮತ್ತು ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ ಅವರೊಂದಿಗೆ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now