--ಇಲ್ಲಿ ಜಾಹೀರಾತು--

ಡಾ.ಸಮೀಕ್ಷಾ ಸಾವಿಗೆ ನ್ಯಾಯ: ಈಶ್ವರ್ ಖಂಡ್ರೆ

On: March 24, 2026 2:31 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು:
ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಯಿಂದ ಮೃತಪಟ್ಟ ಯುವ ಪಶುವೈದ್ಯೆ ಡಾ.ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ ದೊರಕಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಕುಟುಂಬದವರಿಗೆ ಭರವಸೆ ನೀಡಿದರು.
ಆನೇಕಲ್ ಸಮೀಪದ ಸಕಲವಾರದಲ್ಲಿರುವ ಡಾ.ಸಮೀಕ್ಷಾ ರೆಡ್ಡಿ ನಿವಾಸಕ್ಕೆ ತೆರಳಿದ್ದ ಸಚಿವರು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಇದು ಅತ್ಯಂತ ನೋವಿನ ಸಂಗತಿ. ಸರ್ಕಾರ ಈ ನೋವಿನ ಸಂದರ್ಭದಲ್ಲಿ ಕುಟುಂಬದೊಂದಿಗೆ ನಿಲ್ಲುತ್ತದೆ. ವನ್ಯಜೀವಿ ಚಿಕಿತ್ಸೆ ವೇಳೆ ಹುತಾತ್ಮರಾದ ಯುವ ವೈದ್ಯೆಯ ಹೆಸರಲ್ಲಿ ಸ್ಮಾರಕ ನಿರ್ಮಿಸಬೇಕು ಎಂಬ ಅವರ ತಂದೆ ಧ್ರುವಕುಮಾರ್ ಮತ್ತು ತಾಯಿ ಶೈಲಜಾ ರೆಡ್ಡಿ ಅವರ ಬೇಡಿಕೆಯನ್ನು ಪರಿಶೀಲಿಸುವುದಾಗಿ ತಿಳಿಸಿದರು.
ಮೃಗಾಲಯದಲ್ಲಿ ವನ್ಯಜೀವಿಗಳಿಗೆ ಪಶುವೈದ್ಯರು ಚಿಕಿತ್ಸೆ ನೀಡುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದಲ್ಲಿ ಯಾವುದೇ ಲಿಖಿತ ಪ್ರಮಾಣಿತ ಮಾನದಂಡ ಇಲ್ಲ. ಈ ನಿಟ್ಟಿನಲ್ಲಿ ಮಹಿಳಾ ಪಶುವೈದ್ಯರಿಗೆ ಹಾಗೂ ವೈದ್ಯರಿಗೆ ಸುರಕ್ಷತೆ ಕಲ್ಪಿಸುವುದೂ ಸೇರಿದಂತೆ ಕೂಡಲೇ ಸೂಕ್ತ ಎಸ್.ಓ.ಪಿ. ರೂಪಿಸುವಂತೆ ಹಾಗೂ ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಗಳ ನೋವಿನ ನಡುವೆಯೂ ಕುಟುಂಬದ ಸದಸ್ಯರು ಸಾಮಾಜಿಕ ಕಾಳಜಿ ತೋರಿದ್ದಾರೆ. ಹಲವು ಸಲಹೆ ನೀಡಿದ್ದಾರೆ. ಈ ಸಂದರ್ಭ ಪಶುವೈದ್ಯರು ಕೂಡ ತಮ್ಮ ಸಮಸ್ಯೆಗಳನ್ನೂ ತಿಳಿಸಿದ್ದಾರೆ. ಪರಿಹರಿಸಲು ಕ್ರಮ ವಹಿಸಲಾಗುವುದು ಎಂದು ಹೇಳಿದರು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now