--ಇಲ್ಲಿ ಜಾಹೀರಾತು--

ಹಲವು ಮೂಲದಿಂದ ಇಂಧನ ಖರೀದಿ ಯತ್ನ: ಮೋದಿ ಭರವಸೆ

On: March 24, 2026 2:36 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ನವದೆಹಲಿ:
ಪಶ್ಚಿಮ ಏಷ್ಯಾ ಯುದ್ಧವು ಜಾಗತಿಕವಾಗಿ ಗಂಭೀರ ಇಂಧನ ಬಿಕ್ಕಟ್ಟು ಸೃಷ್ಟಿಸಿರುವುದರಿಂದ ಕೇಂದ್ರ ಸರ್ಕಾರ ಸಾಧ್ಯವಿರುವ ಎಲ್ಲ ಮೂಲಗಳಿಂದ ಇಂಧನ ಖರೀದಿಸಲು ಯತ್ನಿಸುತ್ತಿದೆ. ಮುಂದಿನ ದಿನಗಳಲ್ಲೂ ಪ್ರಯತ್ನ ಮುಂದುವರಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.
ರಾಜ್ಯಸಭೆಯಲ್ಲಿ ಮಂಗಳವಾರ ಹೇಳಿಕೆ ನೀಡಿದ ಪ್ರಧಾನಿ ಮೋದಿ, ಪಶ್ಚಿಮ ಏಷ್ಯಾದಲ್ಲಿನ ಯುದ್ಧವು ಅತ್ಯಂತ ಕಳವಳಕಾರಿಯಾಗಿದೆ. ರಾಜತಾಂತ್ರಿಕ ಮಾತುಕತೆಯ ಮೂಲಕ ಈ ಪ್ರದೇಶದಲ್ಲಿ ಶಾಂತಿ ನೆಲೆಸಲು ಸಾಧ್ಯ ಎಂದು ಅವರು ಹೇಳಿದರು.
ಯುದ್ಧದ ತೀವ್ರತೆಯನ್ನು ಕಡಿಮೆ ಮಾಡುವುದು ಮತ್ತು ಹಾರ್ಮುಜ್ ಜಲಸಂಧಿ ಸಂಚಾರಕ್ಕೆ ಮುಕ್ತವಾಗಿಸುವುದು ದೇಶದ ಗುರಿಯಾಗಿದೆ. ಬಿಕ್ಕಟ್ಟನ್ನು ಶಾಂತಿಯುತವಾಗಿ ಪರಿಹರಿಸುವ ಯತ್ನವನ್ನು ಪ್ರೋತ್ಸಾಹಿಸಲಾಗುವುದು. ಪಶ್ಚಿಮ ಏಷ್ಯಾ ಬಿಕ್ಕಟ್ಟು ದೀರ್ಘಕಾಲದವರೆಗೆ ಮುಂದುವರಿದರೆ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಲಭ್ಯವಿರುವ ಎಲ್ಲ ಮೂಲಗಳಿಂದ ಅನಿಲ ಮತ್ತು ಕಚ್ಚಾ ತೈಲ ಖರೀಸಲು ಯತ್ನಿಸಲಾಗುತ್ತಿದೆ ಎಂದು ಹೇಳಿದ್ದಾರೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now