ನವದೆಹಲಿ: ಜ್ವರ ಮತ್ತು ಸೋಂಕು ಹಿನ್ನೆಲೆ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಆರೋಗ್ಯ ಸ್ಥಿರವಾಗಿದೆ. ಇನ್ನೂ ಕೆಲ ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುವುದು ಎಂದು ಆಸ್ಪತ್ರೆ ಅಧ್ಯಕ್ಷ ಡಾ.ಅಜಯ್ ಸ್ವರೂಪ್ ಹೇಳಿದ್ದಾರೆ.
ಮಾರ್ಚ್ 24ರ ರಾತ್ರಿ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಅವರಿಗೆ ಆಂಟಿ ಬಯೋಟಿಕ್ ನೀಡಲಾಗುತ್ತಿದೆ. ಅವರು ಚಿಕಿತ್ಸೆಗೆ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ ಎಂದು ಅಜಯ್ ತಿಳಿಸಿದ್ದಾರೆ. ಅವರ ಸ್ಥಿತಿ ಸ್ಥಿರವಾಗಿದ್ದು, ಯಾವುದೇ ಅಪಾಯವಿಲ್ಲ. ಹವಾಮಾನದಲ್ಲಿನ ಬದಲಾವಣೆಯಿಂದಾಗಿ ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
Author
Post Views: 374







