ಮೈಸೂರು: ಮೈಸೂರಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಗುರುವಾರ ಭೇಟಿ ನೀಡಿದ್ದರು. ಈ ಸಂದರ್ಭ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಕೇಂದ್ರ ಸಚಿವರು ಬೆಳಗ್ಗೆ ಮಠದಲ್ಲಿ ಆಯೋಜಿಸಿದ್ದ ಉಪಹಾರವನ್ನು ಸವಿದರು. ಮಠದ ವತಿಯಿಂದ ಅವರಿಗೆ ಸನ್ಮಾನ ಮಾಡಲಾಯಿತು. ಕೆ.ಎಸ್.ಓ.ಯು.ನಲ್ಲಿ ನಡೆಯಲಿರುವ ಆರ್.ಎಸ್.ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿಮಿತ್ತ ಧರ್ಮೇಂದ್ರ ಪ್ರಧಾನ್ ಅವರು ಮೈಸೂರಿಗೆ ಆಗಮಿಸಿದ್ದಾರೆ. ಮಠಕ್ಕೆ ಭೇಟಿ ನೀಡಿದ ಬಳಿಕ ಅವರು ಕಾರ್ಯಕ್ರಮಕ್ಕೆ ತೆರಳಿದರು.
Author
Post Views: 414











