--ಇಲ್ಲಿ ಜಾಹೀರಾತು--

12 ಮಂದಿ ಸಜೀವ ದಹನ *ಟಿಪ್ಪರ್‌ಗೆ ಖಾಸಗಿ ಬಸ್ ಡಿಕ್ಕಿ: ಹೊತ್ತಿ ಉರಿದ ಬಸ್

On: March 26, 2026 2:32 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಅಮರಾವತಿ: ಟಿಪ್ಪರ್‌ಗೆ ಖಾಸಗಿ ಬಸ್ ಡಿಕ್ಕಿಯಾಗಿ ಹೊತ್ತಿ ಉರಿದ ಪರಿಣಾಮ ಬಸ್ ನಲ್ಲಿದ್ದ ಕನಿಷ್ಠ 12 ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. 20 ಜನರು ಗಾಯಗೊಂಡಿರುವ ದುರ್ಘಟನೆ ಆಂಧ್ರಪ್ರದೇಶದ ಮಾರ್ಕಪುರಂ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
ಹರಿಕೃಷ್ಣ ಟ್ರಾವೆಲ್ಸ್ಗೆ ಸೇರಿದ ಖಾಸಗಿ ಬಸ್ ರಾಯವರಂ ಬಳಿ ಜಲ್ಲಿ ತುಂಬಿದ್ದ ಟಿಪ್ಪರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ತೀವ್ರತೆಗೆ ಬಸ್ ಹೊತ್ತಿ ಉರಿದಿದೆ. ಬೆಂಕಿ ಕೆನ್ನಾಲಿಗೆಗೆ 12 ಮಂದಿ ಸಜೀವ ದಹನವಾಗಿದ್ದಾರೆ. ಪೊಲೀಸರು ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನ ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಬಸ್ ತೆಲಂಗಾಣದ ನಿರ್ಮಲ್ ನಿಂದ ಆಂಧ್ರಪ್ರದೇಶದ ನೆಲ್ಲೂರಿಗೆ ಪ್ರಯಾಣಿಸುತ್ತಿತ್ತು. ಬಸ್ ಟಿಪ್ಪರ್‌ಗೆ ಡಿಕ್ಕಿ ಹೊಡೆದ ತೀವ್ರತೆ ಎಷ್ಟಿತ್ತೆಂದರೆ ತಪ್ಪಿಸಿಕೊಳ್ಳಲು ಅವಕಾಶವೇ ಇರಲಿಲ್ಲ. ಇಡೀ ಬಸ್ ಕ್ಷಣಾರ್ಧದಲ್ಲಿ ಬೂದಿಯಾಯಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿರುವುದಾಗಿ ತಿಳಿಸಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರು ಸಂತಾಪ ಸೂಚಿಸಿದ್ದಾರೆ. ಅಪಘಾತದ ಕಾರಣ ಕುರಿತು ಸಮಗ್ರ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now