--ಇಲ್ಲಿ ಜಾಹೀರಾತು--

ದಾಸವಾಳ ನುಂಗಿ ಮಗು ಸಾವು

On: March 30, 2026 2:13 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಮೈಸೂರು: ಒಣಗಿದ ದಾಸವಾಳದ ಹೂವು ನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹುಣಸೂರು ತಾಲ್ಲೂಕಿನ ದೊಡ್ಡ ಹೆಜ್ಜೂರು ಗ್ರಾಮದಲ್ಲಿ ನಡೆದಿದೆ. ದೊಡ್ಡಹೆಜ್ಜೂರಿನ ಸುದರ್ಶನ್-ನವ್ಯ ದಂಪತಿಯ ಎರಡನೇ ಪುತ್ರ ಆರು ತಿಂಗಳ ಚಿನ್ಮಯಿಗೌಡ ಸಾವನ್ನಪ್ಪಿದ ಮಗು.
ಮನೆಯ ಹೊಸಲಿನಲ್ಲಿ ಪೂಜೆಗೆ ಇರಿಸಿದ್ದ ದಾಸವಾಳದ ಹೂವನ್ನು ಮಗು ನುಂಗಿದ ಪರಿಣಾಮ ಉಸಿರುಗಟ್ಟಿ ಸಾವನ್ನಪ್ಪಿದೆ. ತನ್ನ ಅಣ್ಣನೊಂದಿಗೆ ಆಟವಾಡುತ್ತಿದ್ದ ಮಗು ಮನೆಯ ಹೊಸಲಿಗೆ ಪೂಜೆಗೆ ಇಟ್ಟಿದ್ದ ದಾಸವಾಳದ ಹೂವಿನ ತುಂಡನ್ನು ಬಾಯಿಗೆ ಹಾಕಿಕೊಂಡಿದೆ. ಈ ವೇಳೆ ಅಣ್ಣ ಕಿತ್ತುಕೊಳ್ಳುತ್ತಾನೆಂದು ಮಗು ಒಣಗಿದ ಹೂವನ್ನು ನುಂಗಿದ್ದರಿAದ ಉಸಿರಾಟದ ತೊಂದರೆಯಾಗಿ ಅಸ್ವಸ್ಥಗೊಂಡಿದೆ. ತಕ್ಷಣ ಹನಗೋಡಿನ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮಗು ಮೃತಪಟ್ಟಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now