
ತುಮಕೂರು: ತಾಲ್ಲೂಕಿನ ನಾಗವಲ್ಲಿ ಬಳಿಯ ಮಾಯಣ್ಣಗೌಡನ ಪಾಳ್ಯದ ಹತ್ತಿರ ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ತಾಲ್ಲೂಕಿನ ರಂಗನಾಥಪುರದ ಪ್ರಸಾದ್ (21), ವಸಂತಕುಮಾರ್ (22) ಮೃತಪಟ್ಟವರು.
ಕುಣಿಗಲ್ ಕಡೆಯಿಂದ ಸ್ವಗ್ರಾಮಕ್ಕೆ ತೆರಳುವಾಗ ನಿಯಂತ್ರಣ ತಪ್ಪಿದ ಬೈಕ್ ರಸ್ತೆಗೆ ಉರುಳಿದೆ. ಗಂಭೀರ ಗಾಯಗೊಂಡಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಸಂತ ಖಾಸಗಿ ಕಂಪನಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪ್ರಸಾದ್ ಪೇಟಿಂಗ್ ಕೆಲಸ ಮಾಡಿಕೊಂಡಿದ್ದರು. ಸ್ನೇಹಿತನ ಹುಟ್ಟುಹಬ್ಬದ ಸಂಭ್ರಮಾಚರಣೆ ಮುಗಿಸಿಕೊಂಡು ವಾಪಸ್ ತೆರಳುವಾಗ ಬೈಕ್ ಅಪಘಾತವಾಗಿದೆ. ಹೆಬ್ಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author
Post Views: 214







