--ಇಲ್ಲಿ ಜಾಹೀರಾತು--

ನೀರಿನಲ್ಲಿ ಮುಳುಗಿ ಮಗು ಸಾವು: ತಾಯಿಯೂ ಆತ್ಮಹತ್ಯೆ

On: April 2, 2026 2:17 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now

ಬೆಂಗಳೂರು: ಒಣಹಾಕಿದ್ದ ಬಟ್ಟೆ ತರಲು ಹೋಗಿದ್ದ ವೇಳೆ ನೀರಿನ ಬಕೆಟ್‌ನಲ್ಲಿ ಮುಳುಗಿ ಮಗು ಸಾವನ್ನಪ್ಪಿದ್ದನ್ನು ನೋಡಿ ಶಾಕ್‌ಗೆ ಒಳಗಾದ ತಾಯಿ ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ನಗರದ ಭೈರವೇಶ್ವರ ನಗರದಲ್ಲಿ ನಡೆದಿದೆ.
ಮಗು ಅಗಸ್ತ್ಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದೆ. ತಾಯಿ ಪ್ರತಿಭಾ (29) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ತಾಯಿ, ಮಗು ಇಬ್ಬರೇ ಇದ್ದಾಗ ಘಟನೆ ನಡೆದಿದೆ. ಪ್ರತಿಭಾ ಮತ್ತು ಮಹಂತೇಶ್ ಇಬ್ಬರೂ ಸಾಫ್ಟ್ವೇರ್ ಉದ್ಯೋಗಿಗಳಾಗಿದ್ದರು. ಪ್ರತಿಭಾ ವರ್ಕ್ ಫ್ರಂ ಹೋಂ ಮಾಡುತ್ತಿದ್ದರು. ಗಂಡ ಮಹಂತೇಶ್ ಕೆಲಸದ ನಿಮಿತ್ತ ಹೊರಗೆ ಹೋಗಿದ್ದರು. ರಾತ್ರಿ ಪತಿ ಮಹಂತೇಶ್ ವಾಪಸ್ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಪತ್ನಿ ಬಾಗಿಲು ಓಪನ್ ಮಾಡದಿದ್ದಾಗ ಮಹಂತೇಶ್ ತನ್ನ ಬಳಿ ಇದ್ದ ಕೀಲಿಯಿಂದ ಬಾಗಿಲು ಓಪನ್ ಮಾಡಿದ್ದಾರೆ. ಒಳಗೆ ಬಂದು ನೋಡಿದಾಗ ಪ್ರತಿಭಾ ನೇಣಿಗೆ ಶರಣಾಗಿದ್ದರೆ ಮಗು ಹಾಸಿಗೆ ಮೇಲೆ ಮಲಗಿದ ಸ್ಥಿತಿಯಲ್ಲಿತ್ತು. ಮಗುವನ್ನು ನೋಡಿದಾಗ ಮಗು ಕೂಡ ಮೃತ ಪಟ್ಟಿರುವುದು ದೃಢಪಟ್ಟಿದೆ. ಪಕ್ಕದಲ್ಲಿ ಪತ್ನಿ ಬರೆದಿಟ್ಟ ಡೆತ್ ನೋಟ್ ಕೂಡ ಪತ್ತೆಯಾಗಿದೆ. ಡೆತ್ ನೋಟ್ ಪಕ್ಕದಲ್ಲಿ ಖಾಲಿಯಾಗಿದ್ದ 15 ಮಾತ್ರೆಗಳ ಶೀಟ್ ಪತ್ತೆಯಾಗಿದೆ. ಡೆತ್‌ನೋಟ್‌ನಲ್ಲಿ ಪತ್ನಿ ಬಿಚ್ಚಿಟ್ಟ ಸತ್ಯ ನೋಡಿ ಪತಿ ಶಾಕ್ ಆಗಿದ್ದಾರೆ.

ಡೆತ್‌ನೋಟ್‌ನಲ್ಲಿ ಏನಿದೆ: ನಾನು ಒಣಹಾಕಿದ್ದ ಬಟ್ಟೆ ತರಲು ಟೆರೆಸ್‌ಗೆ ಹೋಗಿದ್ದೆ. ಈ ವೇಳೆ ಮಗು ಆಟ ಆಡಿಕೊಂಡು ಬಚ್ಚಲು ಮನೆಗೆ ಹೋಗಿದೆ. ಆ ವೇಳೆ ಬಕೆಟ್‌ನಲ್ಲಿ ಮುಳುಗಿ ಸತ್ತಿದೆ. ನನ್ನ ಮಗುವನ್ನ ಉಳಿಸಿಕೊಳ್ಳಲು ಆಗಲಿಲ್ಲ. ನನ್ನ ಮಗುವಿನ ಸಾವಿಗೆ ನಾನೇ ಕಾರಣ. ಹೀಗಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಪ್ರತಿಭಾ ಡೆತ್ ನೋಟ್‌ನಲ್ಲಿ ಬರೆದಿದ್ದಾರೆ. ಮೊದಲಿಗೆ ಪ್ರತಿಭಾ ಮಾತ್ರೆ ನುಂಗಿ ಕೈ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆದರೆ ರಕ್ತ ಬಾರದ ಹಿನ್ನೆಲೆ ನೇಣಿಗೆ ಶರಣಾಗಿದ್ದಾರೆ. ಘಟನೆ ಸಂಬಂಧ ಚಂದ್ರಾಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now