--ಇಲ್ಲಿ ಜಾಹೀರಾತು--

ಸ್ವಾಮೀಜಿ ವಿರುದ್ಧ ದೂರು: ಸಂತ್ರಸ್ತ ಮಹಿಳೆ ನಾಪತ್ತೆ?

On: April 8, 2026 2:21 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ಕೂಡಲಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದ ಮಹಿಳೆ ನಾಪತ್ತೆ ಆಗಿದ್ದಾರೆ ಎನ್ನಲಾಗದೆ.
ಪಂಚಮಸಾಲಿ ಸಮುದಾಯದ ಮೀಸಲಾತಿ ಹೋರಾಟದ ನೇತೃತ್ವ ವಹಿಸಿಕೊಂಡಿದ್ದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಬೆಂಗಳೂರಿನ ಮಹಿಳೆ ದೂರು ನೀಡಿದ್ದರು. ಸ್ವಾಮೀಜಿ ನನ್ನ ಖಾಸಗಿ ವಿಡಿಯೋ ಮಾಡಿಕೊಂಡು ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ದೂರು ಸಲ್ಲಿಸಿದ್ದರು.
ಗಂಭೀರ ಆರೋಪ ಮಾಡಿದ್ದ ಮಹಿಳೆ ವಿರುದ್ಧ ಸ್ವಾಮೀಜಿ ಪ್ರತಿದೂರು ದಾಖಲಿಸುತ್ತಿದ್ದಂತೆ ಮಹಿಳೆ ನಾಪತ್ತೆಯಾಗಿದ್ದಾರೆ. ಮಹಿಳೆಯನ್ನು ಸಂಪರ್ಕಿಸಲು ಯತ್ನ ಮಾಡಿದರೂ ಸಂತ್ರಸ್ಥೆ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಮಹಿಳೆಯ ಅಧಿಕೃತ ನಿವಾಸಕ್ಕೂ ತೆರಳಿ ಪರಿಶೀಲನೆ ಮಾಡಿದ್ದಾರೆ. ಆದರೂ ಮಹಿಳೆ ಪತ್ತೆಯಾಗಿಲ್ಲ. ಮಹಿಳೆ ಫೋನ್ ಕೂಡ ಸ್ವಿಚ್ಡ್ ಆಫ್ ಆಗಿದೆ. ಹೀಗಾಗಿ ಯಾವುದೇ ಪ್ರಕರಣ ದಾಖಲಿಸಿಕೊಂಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now