
ತುಮಕೂರು: ಮಧುಗಿರಿ ತಾಲ್ಲೂಕಿನ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಎ.ಎನ್.ಕಾಂತಮ್ಮ (43) ಹೃದಯಾಘಾತದಿಂದ ಗುರುವಾರ ಮುಂಜಾನೆ ಸಾವನ್ನಪ್ಪಿದ್ದಾರೆ.
ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದಲ್ಲಿ ಅವರು ವಾಸವಿದ್ದರು. ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಅಂಚೆದೊಡ್ಡಿ ಗ್ರಾಮದವರು. ಅವಿವಾಹಿತರಾಗಿದ್ದ ಅವರು 2025 ಜೂನ್‌ನಿಂದ ಮಧುಗಿರಿಯಲ್ಲಿ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು ವಸತಿ ಗೃಹದಲ್ಲಿಯೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
Author
Post Views: 199







