
ಬೀದರ್: ಜಿಲ್ಲೆಯಲ್ಲಿ ಬಿಸಿಲಿನ ಝಳಕ್ಕೆ ಕುಸಿದು ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಕಮಲನಗರ ಪಟ್ಟಣದಲ್ಲಿ ನಡೆದಿದೆ. ಮೊಹ್ಮದ್ ಸಮೀರ್ ಅಹ್ಮದ್ (20) ಸಾವನ್ನಪ್ಪಿದ ಯುವಕ. ಗರಿಷ್ಠ ತಾಪಮಾನ ಸಹಿಸಲಾರದೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಸಮೀರ್ ತರಕಾರಿ ತರಲು ಹೋಗಿದ್ದ. ಬಳಿಕ ಮನೆಗೆ ವಾಪಸ್ಸಾಗುವಾಗ ತಲೆ ತಿರುಗಿ ಕುಳಿತಿದ್ದ. ಸ್ವಲ್ಪ ಹೊತ್ತಾದ ಮೇಲೆ ಮನೆಗೆ ಮರಳುವಾಗ ಡಿಗ್ಗಿ ಗ್ರಾಮದ ರಸ್ತೆ ಬಳಿ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ.
ಬಿಸಿಲಿನಿಂದಲೇ ಮಗ ಸಾವನ್ನಪ್ಪಿದ್ದಾನೆ ಎಂದು ತಂದೆ ಲಯಿಕ್ ಅಹ್ಮದ್ ದೂರು ನೀಡಿದ್ದಾರೆ. ಈ ಕುರಿತು ಕಮಲನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Author
Post Views: 154







