--ಇಲ್ಲಿ ಜಾಹೀರಾತು--

ಎಸ್ಎಸ್ಎಲ್ ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ಯಾರಾಮೆಡಿಕಲ್ ಸೇರುವ ಅವಕಾಶ

On: May 1, 2026 2:47 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now

ಬೆಂಗಳೂರು: 2026-27ನೇ ಶೈಕ್ಷಣಿಕ ವರ್ಷದಲ್ಲಿ ಎಸ್ಎಸ್ಎಲ್ ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅರೆ ವೈದ್ಯಕೀಯ (ಪ್ಯಾರಾಮೆಡಿಕಲ್) ಸಂಸ್ಥೆಗಳಲ್ಲಿ ಕೆಲವು ಡಿಪ್ಲೊಮಾ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಿ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ರಾಜ್ಯದಲ್ಲಿ ಸುಮಾರು 640 ಕಾಲೇಜುಗಳನ್ನು ಹೊಂದಿರುವ ಕರ್ನಾಟಕ ಅರೆ ವೈದ್ಯಕೀಯ ಸಂಸ್ಥೆಗಳ ನಿರ್ವಹಣಾ ಸಂಘ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಅವರಿದ್ದ ನ್ಯಾಯಪೀಠ ಈ ಮಧ್ಯಂತರ ಆದೇಶ ನೀಡಿತು. 2026-27ರ ಶೈಕ್ಷಣಿಕ ವರ್ಷದಲ್ಲಿ ಎಸ್ಎಸ್ಎಲ್ ಸಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಪ್ಯಾರಾಮೆಡಿಕಲ್ ನ ಕೋರ್ಸ್ ಗಳಾದ ಪ್ರಯೋಗಾಲಯ ತಂತ್ರಜ್ಞಾನ, ಅಪ್ರೋಮೆಟ್ರಿ ತಂತ್ರಜ್ಞಾನ, ಡಿಪ್ಲೊಮಾ ಇನ್ ಹೆಲ್ತ್ ಇನ್ಸ್ ಪೆಕ್ಟರ್ ಮತ್ತು ಇಮೇಜಿಂಗ್ ತಂತ್ರಜ್ಞಾನ ಸೇರಿದಂತೆ ವಿವಿಧ ಕೋರ್ಸ್ ಗಳಿಗೆ ಸೇರಿಸಿಕೊಳ್ಳಬಹುದು ಎಂದು ಕೋರ್ಟ್ ಆದೇಶಿಸಿದೆ. ಇದಕ್ಕೂ ಮುನ್ನ ನಡೆದ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ನ್ಯಾಷನಲ್ ಹೆಲ್ತ್ ಪ್ರೊಫೆಷನ್ ಅಲೈಡ್ ಆಕ್ಟ್-2021ರಲ್ಲಿ (ಎನ್ಸಿಎಎಚ್ಪಿ) ಕಾಯಿದೆ ಜಾರಿ ಮಾಡಿದ್ದು, ಪ್ಯಾರಾಮೆಡಿಕಲ್ ಕೋರ್ಸ್ ಗೆ ಪದವಿಪೂರ್ವ ಶಿಕ್ಷಣದಲ್ಲಿ ವಿಜ್ಞಾನ ವಿಭಾಗದಲ್ಲಿ ಅಧ್ಯಯನ ಮಾಡಿರಬೇಕು ಎಂದು ತಿಳಿಸಿತ್ತು. 2021ರಲ್ಲಿ ಕಾಯಿದೆ ಜಾರಿ ಮಾಡಿದ್ದರೂ ಅದನ್ನು ಹಂತ ಹಂತವಾಗಿ ಅನುಷ್ಟಾನ ಮಾಡಲಾಗುತ್ತಿತ್ತು. ಈವರೆಗೂ ಪಠ್ಯಕ್ರಮದಲ್ಲಿ ಬದಲಾವಣೆ ಮಾಡಲಾಗುತ್ತಿತ್ತು. ಪ್ರಸಕ್ತ ವರ್ಷದಿಂದ ಪ್ಯಾರಾಮೆಡಿಕಲ್ ಗೆ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಉತ್ತೀರ್ಣರಾಗಿರಬೇಕು ಎಂದು ತಿಳಿಸಲಾಗಿದೆ. ಆದ್ದರಿಂದ ಈ ಹಿಂದೆ ಇದ್ದ ನಿಯಮಗಳಂತೆ ಎಸ್ಎಸ್ಎಲ್ ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೂ ಅವಕಾಶ ನೀಡಬೇಕು ಎಂದು ಕೋರಿದ್ದರು. ವಾದ ಆಲಿಸಿದ ಪೀಠ ಈ ಆದೇಶ ನೀಡಿದೆ.

 

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now