
ಬೆಂಗಳೂರು: ಕೆಲಸ ಮುಗಿಸಿ ಶುಕ್ರವಾರ ತಡರಾತ್ರಿ ಮನೆಗೆ ತೆರಳುವ ವೇಳೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿ ಸಾವನಪ್ಪಿರುವ ಘಟನೆ ಹೊರವಲಯದ ನೆಲಮಂಗಲ ಬಳಿಯ ಹುಸ್ಕೂರು ಎಪಿಎಂಸಿ ಬಳಿ ನಡೆದಿದೆ. ಬೈಕ್ ಸವಾರ ಗಿರೀಶ್ (30) ಸಾವನ್ನಪ್ಪಿದ್ದಾರೆ. ಬೆಂಗಳೂರು ಉತ್ತರ ತಾಲೂಕು ವಡೇರಹಳ್ಳಿ ಗ್ರಾಮದ ನಿವಾಸಿಯಾಗಿದ್ದ ಗಿರೀಶ್ ಡ್ರೈವರ್ ಕೆಲಸ ಮಾಡಿಕೊಂಡಿದ್ದರು.
ಸಿಸಿಟಿವಿಯಲ್ಲಿ ಅಪಘಾತದ ದೃಶ್ಯ ಸೆರೆಯಾಗಿದೆ. ಅಪಘಾತದ ಬಳಿಕ ಟಾಟಾ ಏಸ್ ವಾಹನ ಚಾಲಕ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ.
Author
Post Views: 114







