--ಇಲ್ಲಿ ಜಾಹೀರಾತು--

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಲ್ಲ: ಬ್ಯಾನರ್ಜಿ ಪಟ್ಟು

On: May 5, 2026 2:14 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಪಟ್ಟು ಹಿಡಿದಿದ್ದಾರೆ. ಚುನಾವಣಾ ಫಲಿತಾಂಶವನ್ನು ಕಾನೂನುಬದ್ಧ ಸೋಲು ಎಂದು ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿರುವ ಅವರು, ಹಿನ್ನಡೆ ಹೊರತಾಗಿಯೂ ತಮ್ಮ ರಾಜಕೀಯ ಹೋರಾಟವನ್ನು ಮುಂದುವರಿಸುವುದಾಗಿ ತಿಳಿಸಿದ್ದಾರೆ.
ತೃಣಮೂಲ ಕಾಂಗ್ರೆಸ್ (ಟಿಎಂಸಿ) ಭಾರೀ ಸೋಲಿನ ನಂತರ ಕೋಲ್ಕತ್ತಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬ್ಯಾನರ್ಜಿ, ದೊಡ್ಡ ಪ್ರಮಾಣದ ರಿಗ್ಗಿಂಗ್, ಮತದಾರರ ಪಟ್ಟಿ ತಿರುಚಿರುವುದು ಮತ್ತು ವ್ಯಾಪಕ ಹಿಂಸಾಚಾರ ನಡೆದಿದೆ ಎಂದು ಆರೋಪಿಸಿದರು. ಬಿಜೆಪಿ 100 ಸ್ಥಾನಗಳನ್ನು ಕಳವು ಮಾಡಿದೆ. ಇದು ಪ್ರಜಾಪ್ರಭುತ್ವದ ಕೊಲೆ ಎಂದು ಆರೋಪಿಸಿದರು.
ಮತದಾರರ ಪಟ್ಟಿ ಪರಿಷ್ಕರಣೆ ಸಮಯದಲ್ಲಿ ಸುಮಾರು 90 ಲಕ್ಷ ಹೆಸರುಗಳನ್ನು ಅಳಿಸಲಾಗಿದೆ. ಕೇಂದ್ರ ಪಡೆಗಳು ಟಿಎಂಸಿ ಏಜೆಂಟ್‌ಗಳು ಮತ್ತು ಅಭ್ಯರ್ಥಿಗಳನ್ನು ಬಹು ಜಿಲ್ಲೆಗಳಲ್ಲಿ ಗುರಿಯಾಗಿಸಿಕೊಂಡಿವೆ. ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದರು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now