
ಹಾವೇರಿ: ರಾಜ್ಯ ಸಾರಿಗೆ ಸಂಸ್ಥೆಯ ‘ಪಲ್ಲಕ್ಕಿ’ ಬಸ್ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಧಗಧಗನೆ ಹೊತ್ತಿ ಉರಿದ ಘಟನೆ ಮಂಗಳವಾರ ನಡೆದಿದೆ. 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ರಾಣೆಬೆನ್ನೂರು ತಾಲ್ಲೂಕಿನ ದೇವರೂಡ ಗ್ರಾಮದ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ. ಬಸ್ ಬೆಂಗಳೂರಿನಿAದ ಗದಗಕ್ಕೆ ತೆರಳುತಿತ್ತು. ಬಸ್ನಲ್ಲಿ ಸುಮಾರು 17 ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಬ್ರೇಕ್ ಲೈನ್ ದೋಷದಿಂದ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಕೂಡಲೇ ಎಚ್ಚೆತ್ತುಕೊಂಡ ಚಾಲಕ ಪಕ್ಕೀರಪ್ಪ ಬಸ್ ಅನ್ನು ನಿಲ್ಲಿಸಿದ್ದಾರೆ. ಅವರ ಸಮಯ ಪ್ರಜ್ಞೆಯಿಂದ ಎಲ್ಲಾ 17 ಪ್ರಯಾಣಿಕರ ಜೀವ ಉಳಿದಿದೆ.
Author
Post Views: 134







