
ಬೆಂಗಳೂರು: ಬಿಟ್ ಕಾಯಿನ್ ಬಹುಕೋಟಿ ಹಗರಣ ಸಂಬAಧ ಇಡಿ ಅಧಿಕಾರಿಗಳು ಹ್ಯಾಕರ್ ಶ್ರೀಕಿ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಶ್ರೀಕಿ ಅಲಿಯಾಸ್ ಶ್ರೀಕೃಷ್ಣ, ರಾಬಿನ್ ಖಂಡೇವಾಲ ಮತ್ತು ಸುನೀಶ್ ಹೆಗ್ಡೆ ಬಂಧಿತ ಆರೋಪಿಗಳು.
ಇಡಿ ಅಧಿಕಾರಿಗಳು ಶುಕ್ರವಾರ ತಡರಾತ್ರಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಶನಿವಾರ ಬೆಳಿಗ್ಗೆ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ್ದಾರೆ. ಮೂವರು ಆರೋಪಿಗಳನ್ನು ಇಡಿ ಅಧಿಕಾರಿಗಳು 10 ದಿನ ಕಸ್ಟಡಿಗೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಈ ಮೂಲಕ ಹಗರಣದ ಪ್ರಮುಖ ಆರೋಪಿಯಾದ ನಲಪಾಡ್ ಗೂ ಬಂಧನದ ಭೀತಿ ಎದುರಾಗಿದೆ.
ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ ಬಂಧನ








