--ಇಲ್ಲಿ ಜಾಹೀರಾತು--

ಇಂದು ವಿಜಯ್ ಸರ್ಕಾರ್ ಕೊನೆಗೂ 120 ಶಾಸಕರ ಬೆಂಬಲ ಪ್ರಮಾಣ ವಚನಕ್ಕೆ ಸಿದ್ಧತೆ

On: May 9, 2026 2:38 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಚೆನ್ನೈ: ತಮಿಳುನಾಡಿನಲ್ಲಿ ಕಳೆದ ಐದು ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಕಣ್ಣಾ ಮುಚ್ಚಾಲೆಗೆ ಕೊನೆಗೂ ತೆರೆಬಿದ್ದಿದೆ. ಶತಪ್ರಯತ್ನಗಳ ಬಳಿಕ ವಿಜಯ್ ನೇತೃತ್ವದ ಟಿವಿಕೆಗೆ 120 ಶಾಸಕರ ಬಲ ಸಿಕ್ಕಿದೆ. ಬಳಿಕ ವಿಜಯ್ ಲೋಕಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.
ಸರ್ಕಾರ ರಚನೆಗೆ ರಾಜ್ಯಪಾಲರು ಅವಕಾಶ ನೀಡಿದ್ದಾರೆ. ನಾಳೆ ಮಧ್ಯಾಹ್ನ 3 ಗಂಟೆಗೆ ವಿಜಯ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ವಿಜಯ್ ಪ್ರಮಾಣ ವಚನಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ.
ವಿಸಿಕೆಯ ಬೆಂಬಲದಿAದ ಟಿವಿಕೆಗೆ ಅತ್ಯಂತ ಮಹತ್ವದ ಎರಡು ಸ್ಥಾನಗಳು ಸೇರ್ಪಡೆಯಾಗುತ್ತವೆ. ವಿಜಯ್ ನೇತೃತ್ವದ ಮೈತ್ರಿಗೆ ಈಗಾಗಲೇ 116 ಶಾಸಕರ ಬೆಂಬಲವಿತ್ತು. ಇದರಲ್ಲಿ ಕಾಂಗ್ರೆಸ್‌ನ ಐದು ಶಾಸಕರು ಹಾಗೂ ಎಡಪಂಥೀಯ ಪಕ್ಷಗಳ ನಾಲ್ವರು ಶಾಸಕರೂ ಸೇರಿದ್ದಾರೆ. ವಿಸಿಕೆಯ ಇಬ್ಬರು ಶಾಸಕರ ಬೆಂಬಲ ಸಿಕ್ಕಿದ್ದರಿಂದ ಮೈತ್ರಿಯ ಬಲ 118ಕ್ಕೆ ಏರಿತ್ತು. ಇದೀಗ ಐಯುಎಂಎಲ್ ನ ಇಬ್ಬರು ಶಾಸಕರು ಸಹ ಬೆಂಬಲ ಸೂಚಿಸಿದ್ದರಿಂದ ಟಿವಿಕೆ ಬಲ 120ಕ್ಕೆ ತಲುಪಿದೆ.

ಇನ್ನು ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರು ಎರಡು ದಿನಗಳ ಕೇರಳ ಪ್ರವಾಸ ಕೈಗೊಳ್ಳಬೇಕಿತ್ತು. ಆದರೆ ಇದೀಗ ವಿಜಯ್ ಗೆ ಸರ್ಕಾರ ರಚಿಸಲು ಬೇಕಿರುವಷ್ಟು ಶಾಸಕರ ಬಲ ಸಿಕ್ಕಿದ್ದರಿಂದ ರಾಜ್ಯಪಾಲರು ತಮ್ಮ ಕೇರಳ ಪ್ರವಾಸವನ್ನು ರದ್ದು ಪಡಿಸಿದರು. ಸಂಜೆ ಲೋಕಭವನಕ್ಕೆ ತೆರಳಿದ ವಿಜಯ್ 120 ಶಾಸಕರ ಬೆಂಬಲದ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸುವ ಮೂಲಕ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.
ಅತಿ ದೊಡ್ಡ ಪಕ್ಷವಾಗಿ ಟಿವಿಕೆ ಹೊರಹೊಮ್ಮಿದ ಬಳಿಕ ವಿಜಯ್ ನಾಲ್ಕು ದಿನದಲ್ಲಿ ನಾಲ್ಕು ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ್ದರು. ಆದರೆ ಪ್ರಯತ್ನಗಳು ವಿಫಲವಾಗಿದ್ದವು. ಆದರೆ ಇಂದು 5ನೇ ಬಾರಿಗೆ ರಾಜ್ಯಪಾಲರನ್ನು ವಿಜಯ್ ಭೇಟಿಯಾದರು.

ವಿಜಯ್ ಗೆ ವಿಸಿಕೆ ಬೆಂಬಲ
ಚೆನ್ನೈ: ತಮಿಳುನಾಡಿನಲ್ಲಿ ಸರ್ಕಾರ ರಚನೆಗಾಗಿ ಬಹುಮತಕ್ಕೆ ನಡೆಯುತ್ತಿದ್ದ ಕಸರತ್ತಿಗೆ ಕೊನೆಗೂ ತೆರೆ ಬಿದ್ದಿದೆ. ಟಿವಿಕೆಗೆ ವಿಸಿಕೆ ಬೇಷರತ್ ಬೆಂಬಲ ಘೋಷಿಸಿದೆ. ಈ ಮೂಲಕ ವಿಜಯ್‌ಗೆ 118 ಶಾಸಕರ ಬೆಂಬಲ ಸಿಕ್ಕಿದೆ.
ವಿಸಿಕೆ ಇಬ್ಬರು ಶಾಸಕರು ಟಿವಿಕೆಗೆ ಬೆಂಬಲ ಪತ್ರ ನೀಡಿದ್ದಾರೆ ಎನ್ನಲಾಗಿದೆ. ಆದರೆ, ಬೆಂಬಲದ ಕುರಿತು ವಿಸಿಕೆ ಇನ್ನೂ ಅಧಿಕೃತವಾಗಿ ಹೇಳಿಲ್ಲ. ವಿಸಿಕೆ ಬೆಂಬಲವು ಟಿವಿಕೆ ಬಹುಮತಕ್ಕೆ ನಿರ್ಣಾಯಕವಾಗಿದೆ. ವಿಜಯ್ ನೇತೃತ್ವದ ಒಕ್ಕೂಟವು ಈಗಾಗಲೇ 116 ಚುನಾಯಿತ ಶಾಸಕರ ಬೆಂಬಲವನ್ನು ಹೊಂದಿದೆ. ಇದರಲ್ಲಿ ಕಾಂಗ್ರೆಸ್‌ನ ಐದು ಮತ್ತು ಎಡ ಪಕ್ಷಗಳ ನಾಲ್ಕು ಸ್ಥಾನಗಳು ಸೇರಿವೆ. ವಿಸಿಕೆಯ ಎರಡು ಸ್ಥಾನಗಳನ್ನು ಸೇರಿಸಿದರೆ 118ಕ್ಕೆ ಏರುತ್ತದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now