
ಚಿತ್ರದುರ್ಗ: ಹಿರಿಯೂರು ಶಾಸಕ ಹಾಗೂ ಸಚಿವ ಡಿ.ಸುಧಾಕರ್ ಪಂಚಭೂತಗಳಲ್ಲಿ ಲೀನವಾದರು. ಪಾವಗಡ ರಸ್ತೆಯ ಜೈನ ಮುಕ್ತಿಧಾಮದಲ್ಲಿ ಸೋಮವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನಡೆಯಿತು. ಪುತ್ರ ಸುಹಾಸ್ ಅಂತಿಮ ಕ್ರಿಯೆಗಳನ್ನು ನಡೆಸಿದರು. ಜೈನ ಸಂಪ್ರದಾಯದAತೆ ಅಂತಿಮ ಸಂಸ್ಕಾರ ನಡೆಸಲಾಯಿತು. ಸುಧಾಕರ್ ಅವರ ಪಾರ್ಥಿವ ಶರೀರಕ್ಕೆ ಪುತ್ರ ಸುಹಾಸ್ ಅಗ್ನಿ ಸ್ಪರ್ಶ ಮಾಡಿದರು. ತೀವ್ರ ಅನಾರೋಗ್ಯ ಸಚಿವ ಡಿ.ಸುಧಾಕರ್ ಭಾನುವಾರ ನಿಧನರಾಗಿದ್ದರು. ಅಂತ್ಯ ಸಂಸ್ಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ಪೀಕರ್ ಯುಟಿ ಖಾದರ್, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಶಾಸಕರು ಭಾಗಿಯಾಗಿದ್ದರು.
ಪಂಚಭೂತಗಳಲ್ಲಿ ಡಿ.ಸುಧಾಕರ್ ಲೀನ









