
ಮೈಸೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರ ಆಯ್ಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶ ಪಾಲಿಸಲಾಗುವುದು ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದರು.
ನಗರದಲ್ಲಿ ಮಂಗಳವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶೃಂಗೇರಿ ಕ್ಷೇತ್ರದ ಮರು ಮತ ಎಣಿಕೆ ಫಲಿತಾಂಶಕ್ಕೆ ನ್ಯಾಯಾಲಯ ತಡೆ ನೀಡಿರುವ ಕಾರಣ ರಾಜೇಗೌಡರೇ ಶಾಸಕರಾಗಿ ಮುಂದುವರಿಯುತ್ತಾರೆ. ಮತ್ತೆ ಪ್ರಮಾಣವಚನ ಸ್ವೀಕಾರಕ್ಕೆ ಅವರು ಸಮಯ ಕೇಳಿದ್ದಾರೆ. ಸದ್ಯದಲ್ಲೇ ಅವಕಾಶ ನೀಡುತ್ತೇನೆ ಎಂದು ಹೇಳಿದರು.
ರಾಜೇಗೌಡಗೆ ಮತ್ತೆ ಪ್ರಮಾಣ: ಸ್ಪೀಕರ್









