--ಇಲ್ಲಿ ಜಾಹೀರಾತು--

ಹೃದಯಾಘಾತದಿಂದ ನಟ, ನಿರ್ದೇಶಕ ದಿಲೀಪ್ ನಿಧನ

On: May 13, 2026 2:34 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ಖ್ಯಾತ ನಟ, ನಿರ್ದೇಶಕ ಮತ್ತು ನಿರ್ಮಾಪಕ ದಿಲೀಪ್ ರಾಜ್ (47) ಬುಧವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಹಿಟ್ಲರ್ ಕಲ್ಯಾಣ ಸೀರಿಯಲ್ ಮೂಲಕ ದಿಲೀಪ್ ರಾಜ್ ಕಿರುತೆರೆಗೆ ಕಂಬ್ಯಾಕ್ ಮಾಡಿದ್ದರು. ಆ ಪಾತ್ರಕ್ಕೆ ವೀಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಸಿನಿಮಾ ಮತ್ತು ಟಿವಿ ಎರಡರಲ್ಲೂ ನಟ, ನಿರ್ಮಾಪಕ ದಿಲೀಪ್ ರಾಜ್ ಗುರುತಿಸಿಕೊಂಡಿದ್ದರು. 2005ರಲ್ಲಿ ಬಿಡುಗಡೆಯಾದ ಬಾಯ್‌ಫ್ರೆಂಡ್ ಸಿನಿಮಾದಲ್ಲಿ ನಾಯಕನಾಗಿ ನಟಿಸುವ ಮೂಲಕ ಸಿನಿಮಾಗೆ ಎಂಟ್ರಿ ಕೊಟ್ಟಿದ್ದರು. ಮಿಲನ ಸಿನಿಮಾದಲ್ಲಿ ವಿಲನ್ ಪಾತ್ರದ ಮೂಲಕ ಹೆಸರು ಪಡೆದಿದ್ದರು.
ಸುಗ್ರೀವ, ಗೆಳೆಯ, ಯೂಟರ್ನ್, ಸೇರಿದಂತೆ 28 ಚಿತ್ರಗಳಲ್ಲಿ ದಿಲೀಪ್ ರಾಜ್ ನಟಿಸಿದ್ದಾರೆ. ಸದ್ಯ ಜನಪ್ರಿಯ ಧಾರಾವಾಹಿ ಕೃಷ್ಣ ರುಕ್ಕು ಪ್ರೊಡ್ಯೂಸ್ ಮಾಡುತ್ತಿದ್ದರು. 47 ವರ್ಷದ ದಿಲೀಪ್ ರಾಜ್ ಕೊನೆಯದಾಗಿ ‘ಲವ್ ಮಾಕ್ಟೇಲ್ 3’ ಸಿನಿಮಾದಲ್ಲಿ ನಟಿಸಿದ್ದರು. ಅಲ್ಲದೇ ಮನೆಯೊಂದು ಮೂರು ಬಾಗಿಲು, ರಥಸಪ್ತಮಿ, ಪ್ರೀತಿಗಾಗಿ ಧಾರಾವಾಹಿಗಳಲ್ಲೂ ನಟಿಸಿದ್ದರು.
ಇಂದು ಬೆಳಗಿನ ಜಾವ ದಿಲೀಪ್ ರಾಜ್‌ಗೆ ಹೃದಯಾಘಾತವಾಗಿದೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಕೂಡ ಚಿಕಿತ್ಸೆಗೆ ಸ್ಪಂದಿಸದೇ ದಿಲೀಪ್ ರಾಜ್ ಕೊನೆಯುಸಿರೆಳೆದಿದ್ದಾರೆ. ದಿಲೀಪ್ ನಿಧನಕ್ಕೆ ಕನ್ನಡ ಚಿತ್ರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now