
ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ಜನಿವಾರ ಮತ್ತು ಹಿಜಾಬ್ ಸೇರಿದಂತೆ ಧಾರ್ಮಿಕ ಪದ್ಧತಿಗೆ ಅನುಗುಣವಾದ ವಸ್ತ್ರ ಧರಿಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಸಮವಸ್ತ್ರ ವಿಚಾರವಾಗಿ 2022ರ ಆದೇಶ ಹಿಂಪಡೆದು ಹೊಸ ಆದೇಶ ಹೊರಡಿಸಲಾಗಿದೆ. ಸರ್ಕಾರದ ನಿರ್ದೇಶನಗಳಿಗೆ ಅನುಗುಣವಾಗಿ ಆದೇಶ ಹೊರಡಿಸಲಾಗಿದೆ. ಸಮವಸ್ತ್ರ ನಿಗದಿಪಡಿಸಿ ಕಡ್ಡಾಯಗೊಳಿಸುವುದನ್ನು ಮುಂದುವರೆಸಬಹುದು ಎಂದು ಹೇಳಲಾಗಿದೆ.
ಸಾಮಾನ್ಯವಾಗಿ ವಿದ್ಯಾರ್ಥಿಗಳು ಜನಿವಾರ, ಪವಿತ್ರ ದಾರ, ಶಿವದಾರ, ರುದ್ರಾಕ್ಷಿ, ಪೇಟ ಅಥವಾ ಟರ್ಬನ್, ತಲೆ ವಸ್ತ್ರ ಅಥವಾ ಹಿಜಾಬ್ ಇತರೆ ಯಾವುದೇ ಸ್ವರೂಪದ ಸಾಂಪ್ರದಾಯಿಕ ಸಂಕೇತವನ್ನು ನಿಗದಿಪಡಿಸಲಾದ ಸಮವಸ್ತ್ರ ಜೊತೆಗೆ ಧರಿಸಬಹುದು. ಸಾಂಪ್ರದಾಯಿಕ ಮತ್ತು ಪದ್ಧತಿ ಆಧಾರಿತ ಸಂಕೇತ ಸಮವಸ್ತ್ರಕ್ಕೆ ಪೂರಕವಾಗಿರಬೇಕು ಎಂದು ಸರ್ಕಾರ ಸೂಚಿಸಿದೆ.
ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರಕ್ಕೆ ಅವಕಾಶ








