
ನವದೆಹಲಿ: ನೀಟ್ ಯುಜಿ ಮರು ಪರೀಕ್ಷೆಯನ್ನು ಜೂನ್ 21ರಂದು ನಡೆಸಲಾಗುತ್ತದೆ ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್’ಟಿಎ) ಅಧಿಕೃತವಾಗಿ ತಿಳಿಸಿದೆ.
ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಮೇ 3ರಂದು ನಡೆದಿದ್ದ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿದ್ದರಿಂದ ಈಗ ಮರು ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಲಾಗಿದೆ.
ಕೇಂದ್ರೀಯ ತನಿಖಾ ದಳ ಈಗ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ನಡೆಸುತ್ತಿದೆ. ಹೆಚ್ಚಿನ ವಿವರಗಳಿಗಾಗಿ ಅಧಿಕೃತ ವೆಬ್ಸೈಟ್ ಅಥವಾ ಸಾಮಾಜಿಕ ಜಾಲತಾಣವನ್ನು ಮಾತ್ರ ಅವಲಂಬಿಸಬೇಕೆಂದು ತಿಳಿಸಿದೆ.
Editor TumkurVarthe
ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು












