--ಇಲ್ಲಿ ಜಾಹೀರಾತು--

ದರ್ಶನ್ ಗೆ 1 ವರ್ಷ ಜೈಲು ಫಿಕ್ಸ್ ಇನ್ನೂ 1 ವರ್ಷ ಜಾಮೀನು ಅರ್ಜಿ ಸಲ್ಲಿಸುವಂತಿಲ್ಲ: ಸುಪ್ರೀಂ ಆದೇಶ

On: May 15, 2026 2:22 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದ ಪ್ರಮುಖ ಆರೋಪಿ, ನಟ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದೆ. ಇನ್ನೂ ಕನಿಷ್ಠ ಒಂದು ವರ್ಷ ಜೈಲೂಟ ಅನಿವಾರ್ಯವಾಗಿದೆ.
ಒಂದು ವರ್ಷದೊಳಗೆ ವಿಚಾರಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಸೂಚಿಸಿದ ಕೋರ್ಟ್ ಅಲ್ಲಿಯವರೆಗೆ ಜಾಮೀನು ನೀಡಲು ನಿರಾಕರಿಸಿದೆ. ಈ ಆದೇಶದಿಂದ ಮುಂದಿನ ವರ್ಷ ಮೇ 15ರವರೆಗೆ ದರ್ಶನ್‌ಗೆ ಜೈಲಿನಲ್ಲಿರುವುದು ಅನಿವಾರ್ಯ.

ನ್ಯಾ. ಪರ್ದಿವಾಲಾ ಮತ್ತು ನ್ಯಾ. ವಿಜಯ್ ಬಿಷ್ನೋಯಿ ಅವರ ಪೀಠದಲ್ಲಿ ಶುಕ್ರವಾರ ದರ್ಶನ್ ಸಲ್ಲಿಸಿದ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು.
ವಿಚಾರಣೆ ಆರಂಭವಾಗುತ್ತಿದ್ದಂತೆ ದರ್ಶನ್ ಪರ ವಕೀಲರು, ಜೈಲಿನಲ್ಲಿ ದರ್ಶನ್ ಅವರನ್ನು ಕ್ವಾರಂಟೈನ್ ಸೆಲ್‌ನಲ್ಲಿ ಇರಿಸಲಾಗಿದೆ. ಯಾರೊಂದಿಗೂ ಮಾತನಾಡಲು ಅವಕಾಶ ನೀಡುತ್ತಿಲ್ಲ. ಕುಟುಂಬ ಸದಸ್ಯರನ್ನು ಭೇಟಿ ಮಾಡಲು ಕೇವಲ ಗ್ಲಾಸ್ ತಡೆಗೋಡೆ ಮೂಲಕ ಅವಕಾಶ ನೀಡಲಾಗುತ್ತಿದೆ. 9 ತಿಂಗಳಿನಿಂದ ಜೈಲಿನಲ್ಲಿದ್ದಾರೆ ಎಂದು ವಾದ ಮಂಡಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ಕ್ವಾರಂಟೈನ್ ಸೆಲ್ ಕೂಡ ಜೈಲಿನ ಒಂದು ಭಾಗವೇ ಆಗಿದೆ. ಸ್ಪೆಷಲ್ ಟ್ರೀಟ್‌ಮೆಂಟ್ ಸಿಗಬಾರದು ಎಂಬ ಉದ್ದೇಶದಿಂದ ಅಲ್ಲಿ ಇರಿಸಿರಬಹುದು. ಜೈಲು ಮ್ಯಾನ್ಯುಯಲ್ ಪ್ರಕಾರ ಅಗತ್ಯ ಸೌಲಭ್ಯಗಳನ್ನು ನೀಡಲು ಸೂಚಿಸುತ್ತೇವೆ ಎಂದು ಆದೇಶಿಸಿದರು.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಒಟ್ಟು 272 ಸಾಕ್ಷಿಗಳಿವೆ. ಈವರೆಗೆ ಕೇವಲ 10 ಸಾಕ್ಷಿಗಳ ವಿಚಾರಣೆ ಮಾತ್ರ ನಡೆದಿದೆ ಎಂದು ತಿಳಿಸಿದ ನ್ಯಾಯಪೀಠವು ವಿಚಾರಣೆ ವಿಳಂಬವಾಗುತ್ತಿರುವುದಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತು.
ಪ್ರಾಸಿಕ್ಯೂಷನ್ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿದ್ದಾರ್ಥ ಲೂತ್ರಾ, 17 ಆರೋಪಿಗಳ ಪರ ವಕೀಲರು ಪಾಟಿಸವಾಲು ಮಾಡುವಾಗ ಒಂದೊಂದು ಸಾಕ್ಷಿಗೆ 5-6 ದಿನ ತೆಗೆದುಕೊಳ್ಳುತ್ತಿದ್ದಾರೆ. ಇದರಿಂದ ವಿಳಂಬವಾಗುತ್ತಿದೆ ಎಂದ ಉತ್ತರಿಸಿದರು.

ಇನ್ನೂ 172ಕ್ಕೂ ಹೆಚ್ಚು ಸಾಕ್ಷಿಗಳ ವಿಚಾರಣೆ ಬಾಕಿ ಇರುವಾಗ ಇಷ್ಟು ಬೇಗ ಜಾಮೀನು ತೀರ್ಮಾನಕ್ಕೆ ಬರಲು ಹೇಗೆ ಸಾಧ್ಯ? ಟ್ರಯಲ್ ನಿಧಾನವಾಗಿರುವುದು ಸತ್ಯ ಎಂದು ಅಭಿಪ್ರಾಯಪಟ್ಟರು.
ದರ್ಶನ್ ಪರ ವಕೀಲ ಮುಕುಲ್ ರೊಹಟಗಿ ಅವರ ವಾದ ಮತ್ತು ಸರ್ಕಾರದ ಪರ ವಾದಗಳನ್ನು ಆಲಿಸಿದ ನ್ಯಾಯಾಲಯ ಸದ್ಯಕ್ಕೆ ಅರ್ಹತೆ ಆಧಾರದ ಮೇಲೆ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಹೇಳಿ ಕೆಲ ಮಹತ್ವದ ಆದೇಶ ನೀಡಿ ಜಾಮೀನು ಅರ್ಜಿಯನ್ನು ಇತ್ಯರ್ಥ ಮಾಡಿತು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now