--ಇಲ್ಲಿ ಜಾಹೀರಾತು--

ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಯುವಕರ ಸಾವು

On: May 22, 2026 2:37 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನ ಬಲಮುರಿಯಲ್ಲಿ ನಡೆದಿದೆ.
ಮೈಸೂರಿನ ಬೆಳಗೊಳ ಕೈಗಾರಿಕಾ ಪ್ರದೇಶದಲ್ಲಿರುವ ಕೇನ್ಸ್ ಟೆಕ್ನಾಲಜಿಯಲ್ಲಿ ಕೆಲಸ ಮಾಡುತ್ತಿದ್ದ ಚಾಮರಾಜನಗರದ ಕಮರವಾಡಿ ಗ್ರಾಮದ ಮೊಹನ್ ಕುಮಾರ್ (21) ಹಾಗೂ ಮೈಸೂರು ತಾಲ್ಲೂಕಿನ ಕೆಳಹಳ್ಳಿ ಗ್ರಾಮದ ರವಿಚಂದ್ರ (21) ಸಾವನಪ್ಪಿದ ಯುವಕರು.
ಈ ಇಬ್ಬರೂ ಐಟಿಐ ಮುಗಿಸಿ ಕೇನ್ಸ್ ಟೆಕ್ನಾಲಜಿಯಲ್ಲಿ ಕೆಲಸ ಮಾಡುತ್ತಿದ್ದು, ಮತ್ತೊಬ್ಬ ಸ್ನೇಹಿತ ವಿಕಾಸ್ ಜೊತೆಗೂಡಿ ಮೂವರೂ ಬಲಮುರಿ ಪ್ರವಾಸಿ ತಾಣಕ್ಕೆ ಬಂದಿದ್ದ ವೇಳೆ ದುರ್ಘಟನೆ ನಡೆದಿದೆ.
ನೀರಲ್ಲಿ ಮುಳಗಿರುವ ಬಗ್ಗೆ ವಿಕಾಸ್ ಸಮೀಪದ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತರ ಮೂಲಕ ಕೆ.ಆರ್ ಸಾಗರ ಪೊಲೀಸ್ ಠಾಣೆ ಮಾಹಿತಿ ನೀಡಿದ್ದಾರೆ. ವೃತ್ತ ನಿರೀಕ್ಷಕ ವಿವೇಕಾನಂದ, ಪಿಎಸ್‌ಐ ರಮೇಶ್ ಕರ್ಕಿಕಟ್ಟೆ ಮತ್ತು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಸ್ಥಳಿಯ ನುರಿತ ಈಜುಗಾರರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೋಹನ್ ಕುಮಾರ್, ರವಿಚಂದ್ರ ಅವರ ಶವವನ್ನು ಹೊರತೆಗೆಯಲಾಗಿದೆ. ಈ ಸಂಬಂಧ ಕೆಆರ್‌ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now