
ಬೆಂಗಳೂರು: ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ಗುರುವಾರ ಬೆಳಗ್ಗೆ ರಾಜೀನಾಮೆ ನೀಡುವುದು ಖಚಿತವಾಗಿದೆ.
ಸಿದ್ದರಾಮಯ್ಯ ನಾಳೆ ಯಾವಾಗ ರಾಜೀನಾಮೆ ನೀಡುತ್ತಾರೆ ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿದೆ. ನಾಳೆ ಬೆಳಗ್ಗೆ 11.30ಕ್ಕೆ ಸಿದ್ದರಾಮಯ್ಯ ಲೋಕಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 28ರಂದು ಭೇಟಿಯಾಗಲು ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರ ಸಮಯ ಕೋರಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ಬುಧವಾರ ತಿಳಿಸಿವೆ. ಸಿದ್ದರಾಮಯ್ಯ ಗೆಹಲೋತ್ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಲಿದ್ದಾರೆ.
ರಾಜೀನಾಮೆ ನೀಡುವ ಮೊದಲು ಸಿದ್ದರಾಮಯ್ಯ ತಮ್ಮ ಸಂಪುಟದ ಮಂತ್ರಿಗಳಿಗೆ ಮತ್ತು ಆಪ್ತ ಶಾಸಕರಿಗೆ ಉಪಹಾರಕ್ಕೆ ಬರುವಂತೆ ಆಹ್ವಾನಿಸಿದ್ದಾರೆ. ಈ ಬ್ರೇಕ್‌ಫಾಸ್ಟ್ ಸಭೆ ಬಳಿಕ ಸಿಎಂ ಲೋಕಭವನಕ್ಕೆ ತೆರಳಿ ರಾಜೀನಾಮೆ ನೀಡಲಿದ್ದಾರೆ. ರಾಜೀನಾಮೆ ನೀಡಿದ ಬಳಿಕ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಲಿದ್ದಾರೆ.
ಮಾಜಿ ಪ್ರಧಾನಿ ಜವಹರಲಾಲ್ ನೆಹರೂ 62ನೇ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಿದ್ದರು. ಈ ವೇಳೆ ಮಾಧ್ಯಮಗಳು ರಾಜ್ಯ ರಾಜಕೀಯದ ಸದ್ಯದ ಬೆಳವಣಿಗೆಗಳು, ದೆಹಲಿ ಪ್ರವಾಸದ ಬಗ್ಗೆ ಪ್ರಶ್ನಿಸಿದಾಗ ಮುಖ್ಯಮಂತ್ರಿಗಳು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.
ಸಿಎಂ ಸಿದ್ದು ವಿದಾಯ ಫಿಕ್ಸ್ ಇಂದು ಬೆಳಗ್ಗೆ 11.30ಕ್ಕೆ ರಾಜ್ಯಪಾಲರ ಭೇಟಿ ಮಾಡಿ ರಾಜೀನಾಮೆ







