--ಇಲ್ಲಿ ಜಾಹೀರಾತು--

ಡಿಸಿಎಂ ಪರಂಗೆ ಭವ್ಯ ಸ್ವಾಗತ

On: June 6, 2026 3:07 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ತುಮಕೂರು: ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಶನಿವಾರ ತುಮಕೂರು ಜಿಲ್ಲೆಗೆ ಆಗಮಿಸಿದ ಡಾ.ಜಿ. ಪರಮೇಶ್ವರ್ ಅವರಿಗೆ ಜಿಲ್ಲಾ ಆಡಳಿತದ ವತಿಯಿಂದ ಭವ್ಯ ಸ್ವಾಗತ ಕೋರಲಾಯಿತು.
ಜಿಲ್ಲೆಗೆ ಆಗಮಿಸಿದ ಡಾ.ಪರಮೇಶ್ವರ್ ಅವರು ಮೊದಲಿಗೆ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಸಚಿವ ಕೆ.ಎನ್. ರಾಜಣ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದು ಮಾತುಕತೆ ನಡೆಸಿದರು.
ನೂತನ ಡಿಸಿಎಂ ಆಗಮನದ ಹಿನ್ನೆಲೆಯಲ್ಲಿ ತುಮಕೂರು ನಗರದಲ್ಲಿ ಭವ್ಯ ಮೆರವಣಿಗೆಗೆ ಸಕಲ ಸಿದ್ಧತೆಗಳನ್ನು ಮಾಡಲಾಗಿತ್ತು. ಬಟವಾಡಿ ಸರ್ಕಲ್‌ನಿಂದ ಟೌನ್‌ಹಾಲ್ ಸರ್ಕಲ್‌ವರೆಗೆ ತೆರೆದ ವಾಹನದಲ್ಲಿ ಮೆರವಣಿಗೆ ಆಯೋಜಿಸಲಾಗಿದ್ದು, ಮಾರ್ಗದುದ್ದಕ್ಕೂ ಸಾವಿರಾರು ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ನೆರೆದಿದ್ದರು.
ಡಾ. ಪರಮೇಶ್ವರ್ ಅವರಿಗೆ ಅಭಿನಂದನೆ ಸಲ್ಲಿಸಲು ಕಾರ್ಯಕರ್ತರು ಹೂವಿನ ಮಳೆಗರೆದು, ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು. ನಗರದ ಪ್ರಮುಖ ವೃತ್ತಗಳು ಹಾಗೂ ರಸ್ತೆಗಳಲ್ಲಿ ಸ್ವಾಗತ ಕಮಾನುಗಳು, ಬ್ಯಾನರ್‌ಗಳು ಮತ್ತು ಪಕ್ಷದ ಧ್ವಜಗಳಿಂದ ಅಲಂಕಾರ ಮಾಡಲಾಗಿತ್ತು.
ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಆಡಳಿತಾತ್ಮಕ ವಿಷಯಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವ ಉದ್ದೇಶದಿಂದ ಅವರು ಜಿಲ್ಲೆಗೆ ಭೇಟಿ ನೀಡಿದ್ದರು. ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now