--ಇಲ್ಲಿ ಜಾಹೀರಾತು--

ಸಿಇಟಿಯಲ್ಲಿ ಜೆಮ್ಸಿಗೆ 708ನೇ ರ‍್ಯಾಂಕ್

On: June 6, 2026 3:13 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ತುಮಕೂರು: ವಿದ್ಯಾವಾಹಿನಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಎ. ದಾನಿಯ ಜೆಮ್ಸಿ ಅವರು ಕೆ-ಸಿಇಟಿ 2026 ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ ರಾಜ್ಯಮಟ್ಟದಲ್ಲಿ 708ನೇ ಇಂಜಿನಿಯರಿAಗ್ ರ‍್ಯಾಂಕ್ ಗಳಿಸಿದ್ದಾರೆ.
ಶೈಕ್ಷಣಿಕ ಸಾಧನೆಯೊಂದಿಗೆ ಶಿಸ್ತು, ನಿರಂತರ ಪರಿಶ್ರಮ ಮತ್ತು ಆತ್ಮವಿಶ್ವಾಸದ ಪ್ರತೀಕವಾಗಿರುವ ದಾನಿಯ ಜೆಮ್ಸಿಯ ಈ ಸಾಧನೆ ವಿದ್ಯಾವಾಹಿನಿ ಶಿಕ್ಷಣ ಸಂಸ್ಥೆಯ ಗುಣಮಟ್ಟದ ಶಿಕ್ಷಣ, ವಿದ್ಯಾರ್ಥಿ-ಕೇಂದ್ರಿತ ಬೋಧನೆ ಹಾಗೂ ನಿರಂತರ ಮೌಲ್ಯಮಾಪನದ ಫಲವಾಗಿದೆ. ವಿದ್ಯಾವಾಹಿನಿ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ಎನ್.ಬಿ. ಪ್ರದೀಪ್ ಕುಮಾರ್ ಅವರು ಸನ್ಮಾನಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಯಶಸ್ಸೇ ನಮ್ಮ ಸಂಸ್ಥೆಯ ನಿಜವಾದ ಸಂಪತ್ತು. ಎ.ದಾನಿಯ ಜೆಮ್ಸಿಯ ಈ ಅದ್ಭುತ ಸಾಧನೆ ಇತರ ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕವಾಗಿದೆ. ಪರಿಶ್ರಮ, ಶಿಸ್ತು ಮತ್ತು ಸರಿಯಾದ ಮಾರ್ಗದರ್ಶನ ಇದ್ದರೆ ಯಾವುದೇ ಗುರಿಯನ್ನೂ ಸಾಧಿಸಬಹುದು. ದಾನಿಯ ಅವರ ಭವಿಷ್ಯ ಇನ್ನಷ್ಟು ಉಜ್ವಲವಾಗಿರಲಿ ಎಂದು ಹಾರೈಸುತ್ತೇನೆ ಎಂದು ಹೇಳಿದರು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now