--ಇಲ್ಲಿ ಜಾಹೀರಾತು--

ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಪ್ರಕರಣ: ಶಾಸಕನ ಪುತ್ರಿ ಐಶ್ವರ್ಯಾ ಜಾಮೀನು ಅರ್ಜಿ ವಜಾ

On: September 3, 2026 2:44 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now

ಮಂಡ್ಯ: ಶ್ರೀರಂಗಪಟ್ಟಣದ ಆರತಿ ಉಕ್ಕಡ ದೇವಾಲಯದಲ್ಲಿ ಕರ್ತವ್ಯ ನಿರತ ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ತುಮಕೂರು ಶಾಸಕ ಸುರೇಶ್‌ಗೌಡ ಪುತ್ರಿ ಐಶ್ವರ್ಯಾಗೆ ನ್ಯಾಯಾಲಯದಲ್ಲಿ ಹಿನ್ನಡೆಯಾಗಿದೆ.

ಪ್ರಕರಣದಲ್ಲಿ ಜಾಮೀನು ಕೋರಿ ಐಶ್ವರ್ಯಾ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಶ್ರೀರಂಗಪಟ್ಟಣದ 3ನೇ ಅಪರ ಸತ್ರ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿ ಅರ್ಜಿ ವಜಾಗೊಳಿಸಿದೆ.

ಆಗಸ್ಟ್‌ 12ರಂದು ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಭೇಟಿ ನೀಡಿದ್ದ ಐಶ್ವರ್ಯಾ, ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದ ವೇಳೆ ಮಹಿಳಾ ಪಿಎಸ್‌ಐ ಸವಿತಾ ಬಿ. ಅವರೊಂದಿಗೆ ವಾಗ್ವಾದಕ್ಕಿಳಿದಿದ್ದರು. ಈ ವೇಳೆ ಕರ್ತವ್ಯದಲ್ಲಿದ್ದ ಪಿಎಸ್‌ಐಗೆ ಕಪಾಳಮೋಕ್ಷ ಮಾಡಿದ ಆರೋಪ ಕೇಳಿಬಂದಿತ್ತು. ಘಟನೆ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು.

ಪ್ರಕರಣ ದಾಖಲಾಗಿದ್ದರೂ ಐಶ್ವರ್ಯಾ ಅವರನ್ನು ಪೊಲೀಸರು ಬಂಧಿಸಿರಲಿಲ್ಲ. ಇದೀಗ ಜಾಮೀನು ಅರ್ಜಿಯೂ ವಜಾಗೊಂಡಿದೆ.

ಈ ನಡುವೆ, ತಮ್ಮ ಪುತ್ರಿ ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಶಿಕ್ಷೆಯಾಗಲಿ ಎಂದು ಶಾಸಕ ಸುರೇಶ್‌ಗೌಡ ಹೇಳಿದ್ದು, ಪುತ್ರಿಯ ಪರವಾಗಿ ಕ್ಷಮೆಯಾಚಿಸಿದ್ದರು. ಸಾರ್ವಜನಿಕ ಜೀವನದಲ್ಲಿರುವವರು ತಾಳ್ಮೆ ಕಳೆದುಕೊಳ್ಳಬಾರದು. ಪೊಲೀಸರು ಕರ್ತವ್ಯ ನಿರ್ವಹಿಸುವಾಗ ಒತ್ತಡದಲ್ಲಿರುತ್ತಾರೆ. ಇಂತಹ ಘಟನೆ ನಡೆಯಬಾರದಿತ್ತು ಎಂದು ಅವರು ವಿಷಾದಿಸಿದ್ದರು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now