ಮಂಡ್ಯ: ಕೆಆರ್ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ಹಿನ್ನೆಲೆಯಲ್ಲಿ ರಂಗನತಿಟ್ಟು ಪಕ್ಷಿಧಾಮದಲ್ಲಿ ಕಳೆದ 10 ದಿನಗಳಿಂದ ದೋಣಿ ವಿಹಾರ ಸ್ಥಗಿತಗೊಳಿಸಲಾಗಿದೆ.
ನದಿಯಲ್ಲಿ ನೀರಿನ ಮಟ್ಟ ಹಾಗೂ ಹರಿವಿನ ವೇಗದಲ್ಲಿ ಏರುಪೇರಾಗುತ್ತಿರುವುದರಿಂದ ಪ್ರವಾಸಿಗರ ಸುರಕ್ಷತೆ ದಷ್ಟಿಯಿಂದ ಅರಣ್ಯ ಇಲಾಖೆ ಬೋಟಿಂಗ್ನ್ನು ತಾತ್ಕಾಲಿಕವಾಗಿ ಬಂದ್ ಮಾಡಿದೆ. ಇದರಿಂದ ಪಕ್ಷಿಧಾಮಕ್ಕೆ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದ್ದು, ದೂರದ ಊರುಗಳಿಂದ ಬಂದ ಪ್ರವಾಸಿಗರು ನಿರಾಸೆಯಿಂದ ಹಿಂದಿರುಗುತ್ತಿದ್ದಾರೆ.
ಬರಗಾಲದ ನಡುವೆಯೂ
ತಮಿಳುನಾಡಿಗೆ ನೀರು ಹರಿಸುತ್ತಿರುವುದಕ್ಕೆ ಕಾವೇರಿ ಕಣಿವೆಯ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Author
Post Views: 24






